ಪುತ್ತೂರು ತಾಲ್ಲೂಕು ಒಳಮೊಗ್ರು ಗ್ರಾಮದ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ, ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷ ಎಸ್ ಮಾಧವ ರೈ ಕುಂಬ್ರ (61) ರವರು ಹೃದಯಾಘಾತದಿಂದ ಮೇ.22ರಂದು ರಾತ್ರಿ ನಿಧನರಾಗಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಹಿರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿ ಬೂತ್ ಅಧ್ಯಕ್ಷರಾಗಿ ಪ್ರಸ್ತುತ ಒಳಮೊಗ್ರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಇವರು ಕುಂಬ್ರ ವರ್ತಕರ ಸಂಘದ ಮಾಜಿ ಅಧ್ಯಕ್ಷರಾಗಿ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಆರಾಧನಾ ಸಮಿತಿ ಕುರಿಯ ಮಾಡಾವು ಏಳ್ಳಾಡುಗುತ್ತು ಇದರ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಕುಂಬ್ರ ಇದರ ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾಗಿ, ಕುಂಬ್ರ ಅಂಗನವಾಡಿಯ ಬಾಲವಿಕಾ ಸಮಿತಿ ಸದಸ್ಯರಾಗಿ, ಕುಂಬ್ರ ಶ್ರೀರಾಮ ಭಜನಾ ಮಂದಿರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂಬ್ರ ವಲಯ ಅಧ್ಯಕ್ಷರಾಗಿ, ಸಂಟ್ಯಾರು ಕಲ್ಲಕಟ್ಟ ಶ್ರೀ ರಾಜಗುಳಿಗ ಸಾನಿಧ್ಯ ಸಮಿತಿ, ಕುರಿಯ ಏಳಾಡುಗುತ್ತು ತರವಾಡು ದೈವಸ್ಥಾನ ಸೇರಿದಂತೆ ವಿವಿಧ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಮೃತರು ತಾಯಿ ಸುಂದರಿ, ಪತ್ನಿ ಕುಂಬ್ರ ಅಂಗನವಾಡಿ ಶಿಕ್ಷಕಿ ಆಶಾಲತಾ ರೈ, ತಂಗಿಯAದಿರಾದ ರೇವತಿ, ಸುಶೀಲಾ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…