ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.

ಮೊಹಮ್ಮದ್ ಆಸ್ಕರ್ ಆಲಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ನರಿಕೊಂಬು ಗ್ರಾಮದ ಪಾಣೆಮಂಗಳೂರು ಟಾಟ ಮೋಟಾರ್ಸ್ ಎದುರುಕಡೆ ಕಲ್ಲಡ್ಕ ಕಡೆಯಿಂದ ಬರುತ್ತಿದ್ದ ಕಾರು ಬಿ.ಸಿ.ರೋಡಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ. ಗಾಯಗೊಂಡ ಮೊಹಮ್ಮದ್ ಆಸ್ಕರ್ ಆಲಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಚಾಲಕ ಮೊಹಮ್ಮದ್ ಶಾಫಿ ಅವರ ನಿರ್ಲಕ್ಷ್ಯತನದ ಹಾಗೂ ದುಡುಕತನದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಕಾರು ಚಾಲಕನ ಮೇಲೆ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಎಸ್.ಐ.ಸುತೇಶ್ ಭೇಟಿ ನೀಡಿದ್ದಾರೆ.



