ಪಾಣೆಮಂಗಳೂರು ನೇತ್ರಾವತಿ ಸೇತುವೆ ಮೇಲೆ ಪಿಕಪ್ ವಾಹನ ಕೆಟ್ಟು ನಿಂತ ಪರಿಣಾಮವಾಗಿ ಕೆಲಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಬಿ.ಸಿ.ರೋಡಿನಿಂದ ಪಾಣೆಮಂಗಳೂರು ಕಡೆಗೆ ಸಂಚರಿಸುವ ಪಿಕಪ್ ವಾಹನ ಕೆಟ್ಟು ನಿಂತಿತ್ತು. ಹಾಗಾಗಿ ವಾಹನಗಳು ಸಾಲು ಗಟ್ಟಿ ನಿಂತ ದೃಶ್ಯ ಕಂಡು ಬಂದಿದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಪಾಣೆಮಂಗಳೂರು ನೂತನ ಸೇತುವೆ ನಿರ್ಮಾಣವಾಗಿತ್ತಾದರೂ ಸ್ವಲ್ಪ ದಿನ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

ಕೆಲವೇ ದಿನಗಳಲ್ಲಿ ಮತ್ತೆ ಕಾಮಗಾರಿ ಹಿನ್ನೆಲೆ ಸೇತುವೆಯನ್ನು ಬಂದ್ ಮಾಡಲಾಗಿದೆ. ಇದೀಗ ಹಳೆಯ ಸೇತುವೆ ಮೂಲಕ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹಾಗಾಗಿ ಸಂಚಾರಕ್ಕೆ ಅಡಚಣೆಯಾಗಿದೆ.



