ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಛಲವಾದಿ ನಾರಾಯಣಸ್ವಾಮಿ ಅವರ ದಿಗ್ಬಂಧನ; ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ಸಾಂವಿಧಾನಿಕ ಹುದ್ದೆಯಾದ ವಿಧಾನ ಪರಿಷತ್ ವಿಪಕ್ಷ ನಾಯಕರು ಹಾಗೂ ಶೋಷಿತ ಸಮುದಾಯಗಳ ಪ್ರಬಲ ಧ್ವನಿಯಾಗಿರುವ ಛಲವಾದಿ ನಾರಾಯಣಸ್ವಾಮಿ ಅವರು ಕಲ್ಬುರ್ಗಿಯ ಚಿತ್ತಾಪುರದ ಅತಿಥಿ ಗೃಹದಲ್ಲಿ ಕಾಂಗ್ರೆಸ್ಸಿನ ಗೂಂಡಾ ಬೆಂಬಲಿಗರಿ0ದ ದಿಗ್ಬಂಧನಕ್ಕೊಳಗಾದ ಘಟನೆ ಅತ್ಯಂತ ಖಂಡನೀಯವೆ0ದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದ್ರು.


ಪೊಲೀಸರು ವಿಪಕ್ಷದ ನಾಯಕರೊಬ್ಬರಿಗೆ ರಕ್ಷಣೆ ನೀಡಲಾಗದಂತಹ ಪರಿಸ್ಥಿತಿ ರಾಜ್ಯದಲ್ಲಿ ಬಂದೊದಗಿದೆ ಎಂದರೆ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಜನತೆಯ ರಕ್ಷಣೆಯನ್ನು ನಿರೀಕ್ಷಿಸುವುದು ಹೇಗೆ? ಕಾಂಗ್ರೆಸ್ಸಿಗರ ಗೂಂಡಾ ವರ್ತನೆ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತಿದ್ದು ಪ್ರಜಾಪ್ರಭುತ್ವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಎಲ್ಲಾ ಆಶಯಗಳನ್ನು ಗಾಳಿಗೆ ತೂರಲಾಗಿದೆ.

ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿಗಳು ಸಹಜ. ಅದನ್ನು ಸ್ವೀಕರಿಸಲು ಸಾಧ್ಯವಿಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು. ಅದು ಬಿಟ್ಟು ಕಾಂಗ್ರೆಸ್ಸಿನ ಮಂತ್ರಿಗಳು ತಮ್ಮ ಗೂಂಡಾ ಪಡೆಯನ್ನು ಕಳುಹಿಸಿ ಬಿಜೆಪಿ ನಾಯಕರನ್ನು ಬೆದರಿಸಲು ಯತ್ನಿಸಿದರೆ ಅದಕ್ಕೆ ಹೆದರುವವರು ಯಾರೂ ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಗೃಹ ಸಚಿವರಾದ ಪರಮೇಶ್ವರ್ ರವರು ಇದನ್ನು ಗಂಭೀರವಾಗಿ ಪರಿಗಣಿಸಿ ಘಟನೆಗೆ ಕಾರಣರಾದವರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕರು ಒತ್ತಾಯಿಸಿದ್ರು.

Leave a Reply

Your email address will not be published. Required fields are marked *

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

ಮಂಗಳೂರು: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ‘ಸಂಡೇಸ್ ಆನ್ ಸೈಕಲ್’ ಸೈಕಲ್ ಜಾಥಾ ಆಯೋಜನೆ..!

ಮಂಗಳೂರು: ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ದೀಪಾ ಭಸ್ತಿ ಅವರ ವಿಶೇಷ ಉಪನ್ಯಾಸ ಕಾರ್ಯಕ್ರಮ..!

error: Content is protected !!