ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಪಲ್ಲವಿ ಹಾಗೂ ಆಲೂರು ತಾಲ್ಲೂಕಿನ ವೇಣುಗೋಪಾಲ.ಜಿ ಜೊತೆ ಇಂದು ನಿಶ್ಚಯವಾಗಿದ್ದ ಮದುವೆ ಕೊನೆ ಕ್ಷಣದಲ್ಲಿ ಮುರಿದು ಬಿದ್ದ ಘಟನೆ ವರದಿಯಾಗಿದೆ.
ತಾಳಿ ಕಟ್ಟುವ ವೇಳೆ ನಾನು ಬೇರೆ ಹುಡುಗನನ್ನು ಪ್ರೀತಿಸುತ್ತಿದ್ದೇನೆ ಮದುವೆ ಬೇಡ ಎಂದು ಹಠ ಹಿಡಿದ ವಧುವಿನಿಂದ ಕೊನೆಯ ಕ್ಷಣದಲ್ಲಿ ಮದುವೆ ನಿಂತು ಹೋಗಿದೆ. ಹೌದು ಮುಹೂರ್ತದ ವೇಳೆ ಯುವತಿಗೆ ಬಂದ ಕರೆಯಿಂದ ತಕ್ಷಣವೇ ಮದುವೆ ಬೇಡ ಎಂದು ರೂಂಗೆ ಹೋಗಿ ಬಾಗಿಲು ಹಾಕಿಕೊಂಡು ಮದುವೆಗೆ ತೀವ್ರ ವಿರೋಧ ವ್ಯಕ್ತಪಡಿಸಿದಳು ಎನ್ನಲಾಗಿದೆ.
ಯುವತಿ ಮನವೊಲಿಸಲು ಪೋಷಕರು ಶತಾಯಗತಾಯ ಪ್ರಯತ್ನಪಟ್ಟರೂ, ಪೋಷಕರ ಮನವೊಲಿಗು ಕ್ಯಾರೆ ಎನ್ನದ ಯುವತಿ ಮದುವೆ ಬೇಡವೇ ಬೇಡ ಎಂದು ಹಠ ಹಿಡಿದಿದ್ದಾಳೆ. ಇನ್ನು ಯುವತಿ ಹಠ ಮಾಡಿದ್ದಕ್ಕೆ ನನಗು ಈ ಮದುವೆ ಬೇಡ ಎಂದ ವರನಿಂದ ಕಡೆ ಗಳಿಗೆಯಲ್ಲಿ ನಿಂತು ಹೋದ ಮದುವೆ. ಇನ್ನು ಮದುಮಗ ಈಶ್ವರಹಳ್ಳಿ ಕೂಡಿಗೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿದ್ದು, ಪಲ್ಲವಿ ಸ್ನಾತಕೋತ್ತರ ಪದವಿ ಓದುತ್ತಿರುವ ವಿಧ್ಯಾರ್ಥಿಯಾಗಿದ್ದಾಳೆ. ಇನ್ನು ಮಗಳ ಈ ವರ್ತನೆಗೆ ಕಣ್ಣೀರಿಟ್ಟ ಪೋಷಕರು ಸ್ಥಿತಿ ದಿಕ್ಕೇ ತೋಚದಂತಾಗಿದೆ. ಇನ್ನು ಬಡಾವಣೆ ಹಾಗೂ ನಗರಠಾಣೆ ಪೊಲೀಸರು ಮಧ್ಯೆ ಪ್ರವೇಶಿಸಿದರೂ ಪರಿಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗಿಲ್ಲ. ಎನ್ನಲಾಗಿದೆ
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…