ಪ್ರತಿಭಾ ಸೌನ್ಷಿಮಟ್ ಇನಿಶಿಯೇಟಿವ್, ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯು ಮೇ.25ರಂದು ಸಂಜೆ 3 ರಿಂದ ನಗರದ ಉಳಾಯಿಬೆಟ್ಟು ಪೆರ್ಮಂಕಿ ಆಸ್ಕರ್ ಕ್ಲಬ್‌ನಲ್ಲಿ ನಡೆಯಲಿದೆ.
ಈ ಬಗ್ಗೆ ಮಿಸೆಸ್ ಇಂಡಿಯಾ ಪ್ರಾದೇಶಿಕ ನಿರ್ದೇಶಕರಾದ ಪಾತ್‌ವೇ ಎಂಟರ್‌ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಮಾತನಾಡಿ, 3 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಈಗಾಗಲೇ ಒಟ್ಟು 27 ಸ್ಪರ್ದಿಗಳು ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದಾರೆ. ಕಾರ್ಯಕ್ರಮದ ತೀರ್ಪುಗಾರಿಕೆಯನ್ನು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಕಿರೀಟ ಪಡೆದ ವಿಜೇತರಿಂದ ನಡೆಯಲಿದೆ. ಇಲ್ಲಿ ಭಾಗವಹಿಸಿ ಸ್ಪರ್ಧಿಸಿದ ವಿಜೇತರಿಗೆ ಮತ್ತುಸ್ಪರ್ದಿಗಳಿಗೆ ಇದು ಪ್ರತಿಭಾ ಪ್ರದರ್ಶನಕ್ಕೆ ಇರುವ ಉತ್ತಮ ವೇದಿಕೆಯಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದ್ದಿಗೋಷ್ಠಿಯಲ್ಲಿ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಸಲೂನ್ ಮಾಲಕರಾದ ಮರ್ಸಿ ವೀಣಾ ಡಿಸೋಜಾ, ಮಿಸೆಸ್ ಇಂಡಿಯಾ ಅಂತಾರಾಷ್ಟ್ರೀಯ ಕಿರೀಟ ವಿಜೇತೆ ನಿಶಿತಾ ಜೆ.ಶೆಟ್ಟಿಯಾನ್, ಪಾತ್‌ವೇ ಎಂಟರ್ ಪ್ರೈಸಸ್ ಪಾರ್ಟ್ನರ್ ಅನೀಶಾ ಅಂಜೆಲಿನಾ ಗಂಗೂಲಿ, ಟ್ರೈನರ್ ರಕ್ಷಿತಾ ನಾಯರ್ ಉಪಸ್ಥಿತರಿದ್ರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್‌ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್‌ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್‌ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…