ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಮೂಲಕ ಜಿಲ್ಲೆಯ ಇತಿಹಾಸವನ್ನು ತಿರುಚಲಾಗುತ್ತಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿಯವರು ಟೀಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಅಲ್ಲಿನ ಜನರ ಜನಾಭಿಪ್ರಾಯವನ್ನು ಪಡೆದೇ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕುಮಾರಸ್ವಾಮಿಯವರು ರಾಮನಗರ ಜಿಲ್ಲೆ ಸೃಜಿಸುವಾಗ, ಅಲ್ಲಿನ ಇತಿಹಾಸದ ಬಗ್ಗೆ ಯೋಚಿಸಿರಲಿಲ್ಲವೇ ಎಂದು ಮರುಪ್ರಶ್ನಿಸಿದರು. ಜಾರಿನಿರ್ದೇಶನಾಲಯ ತನ್ನ ಎಲ್ಲೆಯನ್ನು ಮೀರುತ್ತಿರುವ ಬಗ್ಗೆ ಸರ್ವೋಚ್ಛ ನ್ಯಾಯಾಲಯ ಗಮನಿಸಿರುವ ಕುರಿತು ಪತ್ರರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇ.ಡಿ ಯವರು, ಐ.ಟಿ.ಯವರು ತನಿಖೆ ಮಾಡುವುದನ್ನೇ ಆಗಲಿ ಅಥವಾ ಕಪ್ಪು ಹಣ ವ್ಯವಹಾರವನ್ನು ಪತ್ತೆ ಹಚ್ಚುವುದನ್ನೇ ಆಗಲಿ ಆಕ್ಷೇಪಿಸುವುದಿಲ್ಲ. ಆದರೆ ಇ.ಡಿ ಮತ್ತು ಐ.ಟಿ ದಾಳಿಗಳು ರಾಜಕೀಯ ದುರುದ್ದೇಶದಿಂದ ನಡೆಯಕೂಡದು. ಪ್ರಸ್ತುತ ಗೃಹ ಸಚಿವ ಜಿ.ಪರಮೇಶ್ವರ ಅವರ ಶಿಕ್ಷಣ ಸಂಸ್ಥೇಯ ಮೇಲೆ ಇ.ಡಿ.ದಾಳಿ ರಾಜಕೀಯ ಪ್ರೇರಿತ. ಸುಪ್ರೀಂ ಕೋರ್ಟ್ ನವರು ಯಾವ ಪ್ರಕರಣಕ್ಕೆ ಸಂಬ0ಧಿಸಿದ0ತೆ ಈ ರೀತಿ ಅವಲೋಕಿಸಿದ್ದಾರೆ ಎಂದು ತೀರ್ಪು ಪರಿಶೀಲಿಸಿದ ನಂತರವಷ್ಟೇ ತಿಳಿಯಲಿದೆ ಎಂದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…