ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಕೆ.ಆರ್. ನಗರ ವಿಧಾನಸಭಾ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದ್ರು. ಕೆ.ಆರ್. ನಗರ ವಿಧಾನಸಭಾ ಕ್ಷೇತ್ರಕ್ಕೆ 404 ಕೋಟಿ ರೂ.ಗಳ ಶಂಕುಸ್ಥಾಪನೆಯಾಗಿದೆ. 109 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು 513 ಕೋಟಿ ರೂ.ಗಳ ವೆಚ್ಚದ ಕಾಮಗಾರಿಗಳಿಗೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿದೆ. ಇದಕ್ಕೆ ಸ್ಥಳೀಯ ಶಾಸಕರಾದ ರವಿಶಂಕರ್ ಕಾರಣ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ. ಸಣ್ಣ ನೀರಾವರಿ ಸಚಿವರು 197 ಕೋಟಿ ರೂ.ಗಳ ವೆಚ್ಚದ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ತಮ್ಮ ಇಲಾಖೆಯೊಂದರಲ್ಲಿಯೇ ಮಾಡಿದ್ದಾರೆ. ಆರೋಗ್ಯ ಇಲಾಖೆಯಡಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ನೆರವೇರಿದೆ ಎಂದಿದ್ದಾರೆ.



