ಈ ಬಾರಿ ಮುಂಗಾರು ಮಳೆ ಒಂದು ವಾರದ ಮುಂಚೆಯೇ ಆಗಮಿಸಿದ್ದು ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ, ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಯೂ ಅನೇಕ ಕಡೆ ಹಾನಿಯುಂಟಾಗಿದೆ, ಹಾನಿಗೊಳಗಾದ ಸ್ಥಳಗಳಿಗೆ ತಕ್ಷಣ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಸ್ಪಂದನೆ ನೀಡುವುದರ ಜೊತೆ 24 ಗಂಟೆಯೂ ಅಲರ್ಟ್ ಆಗಿರಬೇಕು ಎಂದು ಶಾಸಕ ಅಶೋಕ್ ರೈ ಸೂಚನೆಯನ್ನು ನೀಡಿದ್ದಾರೆ.
ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು” ಮಳೆಗಾಲಕ್ಕೆ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಹಿಂದೆಯೇ ಸೂಚನೆಯನ್ನು ನೀಡಲಾಗಿದೆ. ಗಾಳಿ ಮಳೆಗೆ ಅಲ್ಲಲ್ಲಿ ವಿದ್ಯುತ್ ಕಂಬಗಳು ಉರುಳಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಮುರಿದು ಬಿದ್ದ ಕಂಬಗಳ ಮರು ಜೋಡನೆ ಕಾರ್ಯ ಭರದಿಂದ ಸಾಗುತ್ತಿದೆ. ಈಗಾಗಲೇ ಮೆಸ್ಕಾಂ ಇಲಾಖೆಗೆ ಖಡಕ್ ಸೂಚನೆಯನ್ನು ನೀಡಿದ್ದೇನೆ. ಎಲ್ಲೆಲ್ಲಿ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆಯೋ ಅದನ್ನು ಕೂಡಲೇ ದುರಸ್ಥಿ ಮಾಡಿ ವಿದ್ಯುತ್ ಪೂರೈಕೆ ಮಾಡುವಂತೆ ತಿಳಿಸಿದ್ದೇನೆ. ಕೌಪೌಂಡ್ ವಾಲ್ ಕಟ್ಟುವಾಗ ಮಳೆ ನೀರು ಸಂಗ್ರಹಣೆಯಾಗಿ ಪಕ್ಕದ ಮನೆಯವರಿಗೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳಬೇಕು. ಇನ್ನು ಗ್ರಾಮೀಣ ಭಾಗದಲ್ಲಿ ಮಳೆಗೆ ಮನೆಗೆ ಅಥವಾ ಇನ್ಯಾವುದೇ ರೀತಿಯ ಹಾನಿಯಾದಲ್ಲಿ ಗ್ರಾಮಕರಣಿಕರು ತಕ್ಷಣ ಅಲ್ಲಿಗೆ ಭೇಟಿ ನೀಡಬೇಕು. ರಾತ್ರಿ ಘಟನೆ ನಡೆದರೂ ರಾತ್ರಿಯೇ ಭೇಟಿ ನೀಡಬೇಕು. ನೊಂದವರಿಗೆ ಏನೆಲ್ಲಾ ಸಹಾಯ ಬೇಕೋ ಅದೆಲ್ಲವನ್ನೂ ಇಲಾಖೆಯಿಂದ ಮಾಡಬೇಕು. ಪರಿಹಾರ ಕೊಡುವ ವಿಚಾರದಲ್ಲಿಯೂ ಕಂದಾಯ ಅಧಿಕಾರಿಗಳು ತಕ್ಷಣ ಜಾಗೃತರಾಗಿರಬೇಕು ಎಂದು ಸೂಚನೆಯನ್ನು ನೀಡಿದರು. ಅಪಾಯ ಯಕಾರಿ ಮನೆಗಳಿದ್ದಲ್ಲಿ ಅಲ್ಲಿಂದ ಆ ಕುಟುಂಬವನ್ನು ಸ್ಥಳಾಂತರಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಒಟ್ಟಿನಲ್ಲಿ ಜನರಿಗೆ ತೊಂದರೆಯಾಗದAತೆ ಇಲಾಖಾ ಅಧಿಕಾರಿಗಳು ಸ್ಪಂದನೆಯನ್ನು ನೀಡಬೇಕು ಎಂದು ಶಾಸಕರು ತಿಳಿಸಿದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…