ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್‌ರವರು ತಮ್ಮ ಆದೇಶವನ್ನು ಹಿಂಪಡೆಯುವ ಮೂಲಕ ಶಾಸಕರಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಅವಕಾಶ ನೀಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕಾಂಗ್ರೆಸ್ ಸಚಿವರು ಶಾಸಕರ ಹನಿಟ್ರ‍್ಯಾಪ್ ವಿಚಾರದ ಬಗ್ಗೆ ವಿಪಕ್ಷದ ಶಾಸಕರಾಗಿ ಸದನದಲ್ಲಿ ಆಡಳಿತರೂಡ ಸರಕಾರವನ್ನು ವಿರೋಧಿಸುವುದು ನಮ್ಮ ಕರ್ತವ್ಯ. ಸ್ಪೀಕರ್ ಏಕಪಕ್ಷೀಯವಾಗಿ 6 ತಿಂಗಳ ಕಾಲ ಶಾಸಕರನ್ನು ಅಮಾನತು ಮಾಡುವ ಮೂಲಕ ನಮ್ಮ ಸಂವಿಧಾನ ಬದ್ಧ ಹಕ್ಕುಗಳನ್ನು ನಿರ್ಬಂಧಿಸಿದ್ದು ದುರದೃಷ್ಟಕರ. ಈಗಾಗಲೇ ಬಿಜೆಪಿ ಪಕ್ಷದ ವತಿಯಿಂದ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ರಾಜ್ಯದ ಘನವೆತ್ತ ರಾಜ್ಯಪಾಲರೂ ಸ್ಪೀಕರ್ ರವರಿಗೆ ಅಮಾನತು ಆದೇಶ ಹಿಂಪಡೆಯುವAತೆ ಪತ್ರ ಬರೆದಿದ್ರು. ಓರ್ವ ವಿಪಕ್ಷ ಶಾಸಕನಾಗಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಮಸೂದೆಗಳನ್ನು ವಿರೋಧಿಸುವುದು ನನ್ನ ಕರ್ತವ್ಯ. ಇಂತಹ ಅಮಾನತು ಆದೇಶಗಳಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಎಂದಿಗೂ ಸಾಧ್ಯವಿಲ್ಲ ಹಾಗೂ ನಮ್ಮ ಸಿದ್ಧಾಂತ ಹಾಗೂ ರಾಷ್ಟೀಯ ವಿಚಾರದಲ್ಲಿ ಎಂದಿಗೂ ರಾಜೀ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…