ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ನನ್ನ ಮಗ ರೌಡಿಯಲ್ಲ ಆತ ಭಜರಂಗದಳದ ಕಾರ್ಯಕರ್ತ”; ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ

ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪದೇ ಪದೇ ನನ್ನ ಮಗ ರೌಡಿ ರೌಡಿ ಎಂದು ಹೇಳುತ್ತಿದ್ದಾರೆ.

ಆದರೆ, ನನ್ನ ಮಗ ಹಿಂದೂ ಕಾರ್ಯಕರ್ತ. ಹಿಂದೂ ಸಮಾಜದ ಸೇವೆಯಲ್ಲಿ ತನ್ನನ್ನು ಅರ್ಪಿಸಿಕೊಂಡಿದ್ದ ನನ್ನ ಮಗನ ಸಾವು ವ್ಯರ್ಥವಾಗಲು ಬಿಡಬಾರದು. ಅವನ ರಕ್ತಕ್ಕೆ, ಸಾವಿಗೆ ನ್ಯಾಯ ಸಿಗಬೇಕು. ರಾಜ್ಯದ ಸರಕಾರ ಪಿಎಫ್‌ಐ ಹೇಳಿದಂತೆ ಚಾರ್ಜ್ಶೀಟ್ ತಯಾರಿಸುವ ಸಾಧ್ಯತೆ ಇದೆ ಎಂದು ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ ಆಗ್ರಹಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ `ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ರು.

ನನ್ನ ಮಗ ರೌಡಿಯಲ್ಲ ನನ್ನ ಮಗ ಭಜರಂಗದಳದ ಕಾರ್ಯಕರ್ತ. ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಈ ಸರಕಾರ ಅವಕಾಶ ನೀಡುವುದಿಲ್ಲ. ತನಿಖೆಯನ್ನು ಎನ್‌ಐಎಗೆ ವಹಿಸಬೇಕು. ಐವತ್ತಕ್ಕೂ ಹೆಚ್ಚು ಜನರು ಸುತ್ತುವರಿದು ನನ್ನ ಮಗನಿಗೆ ಚಿತ್ರ ಹಿಂಸೆ ಕೊಟ್ಟು ಕೊಂದು ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!