ಗೃಹಸಚಿವ ಡಾ. ಜಿ. ಪರಮೇಶ್ವರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪದೇ ಪದೇ ನನ್ನ ಮಗ ರೌಡಿ ರೌಡಿ ಎಂದು ಹೇಳುತ್ತಿದ್ದಾರೆ.
ಆದರೆ, ನನ್ನ ಮಗ ಹಿಂದೂ ಕಾರ್ಯಕರ್ತ. ಹಿಂದೂ ಸಮಾಜದ ಸೇವೆಯಲ್ಲಿ ತನ್ನನ್ನು ಅರ್ಪಿಸಿಕೊಂಡಿದ್ದ ನನ್ನ ಮಗನ ಸಾವು ವ್ಯರ್ಥವಾಗಲು ಬಿಡಬಾರದು. ಅವನ ರಕ್ತಕ್ಕೆ, ಸಾವಿಗೆ ನ್ಯಾಯ ಸಿಗಬೇಕು. ರಾಜ್ಯದ ಸರಕಾರ ಪಿಎಫ್‌ಐ ಹೇಳಿದಂತೆ ಚಾರ್ಜ್ಶೀಟ್ ತಯಾರಿಸುವ ಸಾಧ್ಯತೆ ಇದೆ ಎಂದು ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಎಂ.ಶೆಟ್ಟಿ ಆಗ್ರಹಿಸಿದ್ದಾರೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ `ಬಜಪೆ ಚಲೋ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ್ರು.
ನನ್ನ ಮಗ ರೌಡಿಯಲ್ಲ ನನ್ನ ಮಗ ಭಜರಂಗದಳದ ಕಾರ್ಯಕರ್ತ. ಸಮಾಜದ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ನನ್ನ ಮಗನ ಕೊಲೆ ಪ್ರಕರಣವನ್ನು ಸರಿಯಾಗಿ ತನಿಖೆ ನಡೆಸಲು ಈ ಸರಕಾರ ಅವಕಾಶ ನೀಡುವುದಿಲ್ಲ. ತನಿಖೆಯನ್ನು ಎನ್‌ಐಎಗೆ ವಹಿಸಬೇಕು. ಐವತ್ತಕ್ಕೂ ಹೆಚ್ಚು ಜನರು ಸುತ್ತುವರಿದು ನನ್ನ ಮಗನಿಗೆ ಚಿತ್ರ ಹಿಂಸೆ ಕೊಟ್ಟು ಕೊಂದು ಹಾಕಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…