ಕರಾವಳಿ

ಉಡುಪಿ: ಬಡ ಕುಟುಂಬಕ್ಕೆ ಆರ್ಕ್ ಆಫ್ ಹೋಪ್ ಮನೆ ಹಸ್ತಾಂತರ

ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಸಾಮಾನ್ಯ ಜುಬಿಲಿ ವರ್ಷದ ಅಂಗವಾಗಿ ಸ್ವಂತ ಮನೆ ಇಲ್ಲದ ಕುಟುಂಬಕ್ಕೆ ಮನೆ ನಿರ್ಮಿಸುವ ವಿಶೇಷ ಯೋಜನೆಯ ಅಂಗವಾಗಿ ತೊಟ್ಟಂ ಸಂತ ಅನ್ನಮ್ಮ ದೇವಾಲಯದಲ್ಲಿ ಚರ್ಚ್ ವ್ಯಾಪ್ತಿಯ ಬಡ ಕುಟುಂಬವೊ0ದಕ್ಕೆ ನಿರ್ಮಿಸಲಾದ ಆರ್ಕ್ ಆಫ್ ಹೋಪ್ ಮನೆಯನ್ನು ಭಾನುವಾರ ಹಸ್ತಾಂತರಿಸಲಾಯಿತು.

ತೊಟ್ಟಂ ಚರ್ಚಿನ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬ ಸ್ವಂತ ಸೂರನ್ನು ಕಾಣಬೇಕು ಎಂಬ ಹಂಬಲವಿದ್ದರೂ ಕೂಡ ಆರ್ಥಿಕ ಸಮಸ್ಯೆಯಿಂದ ಅದು ಸಾಧ್ಯವಾಗಿರಲಿಲ್ಲ. ಈ ವೇಳೆ ಚರ್ಚಿನ ಧರ್ಮಗುರುಗಳಾದ ವಂ|ಡೆನಿಸ್ ಡೆಸಾ ಅವರನೇತೃತ್ವದಲ್ಲಿ ಪಾಲನಾ ಮಂಡಳಿ ಹಾಗೂ ದಾನಿಗಳ ನೆರವಿನೊಂದಿಗೆ ರೂ. 13 ಲಕ್ಷ ರೂ ವೆಚ್ಚದಲ್ಲಿ ಸುಸಜ್ಜಿತ ಮನೆಯನ್ನು ನಿರ್ಮಿಸಲಾಗಿದೆ. ಭಾನುವಾರ ಚರ್ಚಿನ ಧರ್ಮಗುರುಳಾದ ವಂ|ಡೆನಿಸ್ ಡೆಸಾ ಅವರು ನೂತನ ಮನೆಯನ್ನು ಆಶೀರ್ವಚನ ನೆರವೇರಿಸಿ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬಕ್ಕೆ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಅವರು ಮಾನವನಿಗೆ ಒಂದು ಸ್ವಂತ ಮನೆಯಿದ್ದರೆ ನೆಮ್ಮದಿಯ ನಿದ್ದೆಯನ್ನು ಮಾಡಲು ಸಾಧ್ಯವಿದೆ. ಆದರೆ ಇಂದು ಎಷ್ಟೋ ಮಂದಿಗೆ ಜೀವಿಸಲು ಸ್ವಂತ ಮನೆ ಇಲ್ಲದೆ ಪರದಾಡುತ್ತಾರೆ. ಉಡುಪಿ ಧರ್ಮಪ್ರಾಂತ್ಯದಲ್ಲಿ 2025 ಜುಬಿಲಿ ವರ್ಷವಾಗಿ ಆಚರಿಸಲ್ಪಡುತ್ತಿದ್ದು ಈ ನಿಟ್ಟಿನಲ್ಲಿ ಧರ್ಮಾಧ್ಯಕ್ಷರು ಒಂದು ಹೊಸ ಯೋಜನೆ ಯನ್ನು ನೀಡಿದ್ದರು. ಧರ್ಮಪ್ರಾಂತ್ಯದ ವ್ಯಾಪ್ತಿಯಲ್ಲಿ 52 ಚರ್ಚುಗಳಿದ್ದು ಪ್ರತಿಯೊಂದು ಚಚಿನಲ್ಲಿ ಮನೆ ಇಲ್ಲದ ಒಬ್ಬರಿಗೆ ಮನೆ ನಿರ್ಮಿಸಿಕೊಡುವ ಯೋಜನೆ ಹಮ್ಮಿಕೊಳ್ಳಲಾಗಿದೆ. ಅದರಂತೆ ತೊಟ್ಟಂ ಚರ್ಚಿನಲ್ಲಿ ಕೂಡ ಮನೆ ಇಲ್ಲದ ಒಂದು ನಿರ್ಗತಿಕ ಕುಟುಂಬಕ್ಕೆ 13 ಲಕ್ಷ ರೂ. ವೆಚ್ಚದಲ್ಲಿ ಮನೆ ನಿರ್ಮಿಸುವ ಯೋಜನೆ ಹಮ್ಮಿಕೊಂಡು ಚರ್ಚಿನ ಭಕ್ತಾದಿಗಳು, ಮೈಕಲ್ ಡಿಸೋಜಾ ಚಾರಿಟಿ ಟ್ರಸ್ಟ್, ಹಾಗೂ ಇತರ ದಾನಿಗಳ ನೆರವಿನಿಂದ ಯೋಜನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಚರ್ಚಿನ ತೋಮಸ್ ಮತ್ತು ವಲೇರಿಯಾನ ನೊರೊನ್ಹಾ ದಂಪತಿ ಮನೆ ನಿರ್ಮಾಣಕ್ಕೆ ತಮ್ಮ ಜಮೀನಲ್ಲಿ 5 ಸೆಂಟ್ಸ್ ಜಾಗವನ್ನು ಉಚಿತವಾಗಿ ನೀಡಿದ್ದು, ಬಡತನದಿಂದಾಗಿ ಸ್ವಂತ ಮನೆಯಿಲ್ಲದೆ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ವಿನೋದ್ ಮತ್ತು ಅಂಜೆಲಿನ್ ಪಿಂಟೊ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಐದು ತಿಂಗಳ ಅವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಮನೆ ನಿರ್ಮಾಣಕ್ಕೆ 5 ಸೆಂಟ್ಸ್ ಜಾಗವನ್ನು ಉಚಿತವಾಗಿ ನೀಡಿರುವ ತೋಮಸ್ ಮತ್ತು ವಲೇರಿಯಾನ ನೊರೊನ್ಹಾ ದಂಪತಿಯನ್ನು, ಮನೆಯನ್ನು ನಿರ್ಮಿಸಿದ ಎಂಜಿನಿಯರ್ ಎರೋಲ್, ಯೋಜನೆ ಸಾಕಾರಾಗೊಳ್ಳಲು ನೇತೃತ್ವ ವಹಿಸಿದ ಧರ್ಮಗುರುಗಳನ್ನು ಸನ್ಮಾನಿಸಲಾಯಿತು. ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸುನೀಲ್ ಫೆರ್ನಾಂಡಿಸ್, ಕಾರ್ಯದರ್ಶಿ ಬ್ಲೆಸಿಲ್ಲಾ ಕ್ರಾಸ್ತಾ, 20 ಆಯೋಗಗಳ ಸಂಯೋಜಕಿ ವನಿತಾ ಫೆರ್ನಾಂಡಿಸ್, ಕಾನ್ವೆಂಟಿನ ಮುಖ್ಯಸ್ಥರಾದ ಸಿಸ್ಟರ್ ಸುಷ್ಮಾ, ಮೈಕಲ್ ಡಿಸೋಜಾ ಚಾರಿಟಿ ಟ್ರಸ್ಟ್ ನ ಸದಸ್ಯರಾದ ಸ್ಟೀಫನ್ ಪಿಂಟೊ, ಓಸ್ವಲ್ಡ್ ರೊಡ್ರಿಗಸ್, ಸಂತ ವಿನ್ಸೆಂಟ್ ದಿ ಪಾವ್ಲ್ ಸೊಸೈಟಿ ಉಡುಪಿ ಕಲ್ಯಾಣಪುರ ವಲಯ ಪದಾಧಿಕಾರಿಗಳಾದ ವಿನ್ಸೆಂಟ್ ಕ್ವಾಡ್ರಸ್, ರಿಚ್ಚಾರ್ಡ್ ಡಿಸೋಜಾ, ತೊಟ್ಟಂ ಘಟಕದ ಅಧ್ಯಕ್ಷರಾದ ಸುಸಾನ್ನಾ ವಾಸ್, ಸಂತ ಸೆಬೆಸ್ಟಿಯನ್ ವಾರ್ಡ್ ನ ಗುರಿಕಾರರಾದ ರೊನಾಲ್ಡ್ ಫೆರ್ನಾಂಡಿಸ್, ಬಡಾನಿಡಿಯೂರು ಗ್ರಾಮ ಪಂಚಾಯತ್ ಸದಸ್ಯರಾದ ಜೊಸೇಫ್ ಪಿಂಟೊ ಹಾಗೂ ಇತರರು ಉಪಸ್ಥಿತರಿದ್ದರು. ವಿನೋದ್ ಪಿಂಟೊ ಸ್ವಾಗತಿಸಿ, ವೆನಿಸ್ಸಾ ಪಿಂಟೊ ವಂದಿಸಿದರು ಲೆಸ್ಲಿ ಆರೋಜಾ ಕಾರ್ಯಕ್ರಮ ನಿರೂಪಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…

2 hours ago

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…

2 hours ago

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…

2 hours ago

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…

2 hours ago

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…

2 days ago

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…

2 days ago