ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರ ಬಿದ್ದು ಮಗು ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ಸುಬ್ರಹ್ಮಣ್ಯ – ಉಡುಪಿ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಸಂಭವಿಸಿದೆ.
ಕುಕ್ಕೆ ಸುಬ್ರಹ್ಮಣ್ಯ ಭಾಗದಿಂದ ಇಚ್ಲಂಪಾಡಿ ಮೂಲಕ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರಿನ ಮೇಲೆ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ಬೃಹತ್ ಮರ ಮುರಿದು ಬಿದ್ದಿದೆ. ಘಟನೆಯಿಂದ ಕಾರಿನಲ್ಲಿದ್ದ ಚಾಲಕ, ಇಬ್ಬರು ಮಹಿಳೆಯರು, ಒಂದು ಮಗು ಕಾರಿನಲ್ಲಿ ಸಿಲುಕಿಕೊಂಡಿದ್ರು. ಸ್ಥಳೀಯರು ಕಾರ್ಯಾಚರಣೆ ನಡೆಸಿ ಸಿಲುಕಿದ್ದ ಗಾಯಾಳುಗಳನ್ನು ಹೊರ ತೆಗೆದು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಿದ್ದಾರೆ.
ಕಾರಿನಲ್ಲಿದ್ದವರ ಮುಖ, ಮೈ-ಕೈಗೆ ತೀವ್ರ ತರಹದ ಗಾಯವಾಗಿದೆ. ಘಟನೆಯಿಂದ ಕೆಲ ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊ0ಡಿದೆ ಸ್ಥಳೀಯರು ಮರ ತೆರವಿಗೆ ಸಹಕರಿಸಿದ್ರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…