ರಾಜ್ಯ

ಮಂಡ್ಯ: ಪೊಲೀಸರ ಎಡವಟ್ಟಿನಿಂದ ಪ್ರಾಣಬಿಟ್ಟ ಕಂದಮ್ಮ

ಟ್ರಾಫಿಕ್ ಪೊಲೀಸರ ಎಡವಟ್ಟಿನಿಂದ ಮೂರೂವರೆ ವರ್ಷದ ಬಾಲಕಿ ಮೃತಪಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ ಮತ್ತು ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುರುತಿಸಲಾಗಿದೆ. ಬಾಲಕಿಗೆ ನಾಯಿ ಕಚ್ಚಿದ್ದರಿಂದ ಆಸ್ಪತ್ರೆಗೆ ದಂಪತಿ ಕರೆದುಕೊಂಡು ಬರುತ್ತಿದ್ದರು. ಈ ವೇಳೆ, ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪೊಲೀಸರು ಹೆಲ್ಮೆಟ್ ತಪಾಸಣೆಗೆ ತಡೆದಿದ್ದಾರೆ. ಇದರಿಂದ ಬೈಕ್ ಆಯ ತಪ್ಪಿ ಬಿದ್ದು, ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರವದಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ.

ರಸ್ತೆಯಲ್ಲೇ ಮಗುವನ್ನು ಮಡಿನಲ್ಲಿಟ್ಟುಕೊಂಡು ತಂದೆ-ತಾಯಿ ಗೋಳಾಡಿದ್ದಾರೆ. ಅಲ್ಲದೇ ಸಾರ್ವಜನಿಕರು, ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಂಡ್ಯ ಎಸ್‍ಪಿ ಮಲ್ಲಿಕಾರ್ಜುನ ಬಾಲದಂಡಿ, ಘಟನೆಯ ವರದಿ ಪಡೆದು, ಸ್ಥಳದಲ್ಲಿದ್ದ ಮೂವರು ಎಎಸ್‌ಐಗಳನ್ನು ಸಸ್ಪೆಂಡ್ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಘಟನೆ ಬಗ್ಗೆ ಕಾಂಗ್ರೆಸ್​ ಶಾಸಕ ಗಣಿಗ ರವಿಕುಮಾರ್‌ ಪ್ರತಿಕ್ರಿಯಿಸಿ, ನಾನು ಸಂತ್ರಸ್ತರನ್ನು ಭೇಟಿಯಾಗಿ ಮಾತನಾಡುತ್ತೇನೆ. ಘಟನೆಗೆ ಕಾರಣರಾದ ಪೊಲೀಸರನ್ನು ಅಮಾನತುಗೊಳಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ ಘಟನೆಗೆ ಕಾರಣರಾದ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ.

ಘಟನೆ ಖಂಡಿಸಿ ಪೊಲೀಸರ ವಿರುದ್ಧ ಪೋಷಕರು, ಸಂಬಂಧಿಕರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ, ಪ್ರತಿಭಟನಾಕಾರರ ಮನವೊಲಿಸಲು ಹರಸಾಹಸಪಟ್ಟರು. ಈ ವೇಳೆ ಮಾತನಾಡಿದ ಅವರು, ಘಟನೆಗೆ ವಿಷಾದ ವ್ಯಕ್ತಪಡಿಸುತ್ತೇನೆ. ಕರ್ತವ್ಯದಲ್ಲಿದ್ದ ಮೂವರು ಎಎಸ್‌ಐಗಳನ್ನು ಅಮಾನತು ಮಾಡಲಾಗಿದೆ. ಪ್ರಕರಣ ಸಂಬಂಧ ಇಲಾಖಾ ತನಿಖೆ ಮಾಡುತ್ತೇವೆ. ಅಲ್ಲದೇ ಶಾಸಕರ ಜತೆ ಮಾತನಾಡಿದ್ದು, ಮಗು ಕುಟುಂಬಕ್ಕೆ ಅಗತ್ಯ ಪರಿಹಾರದ ಭರವಸೆ ನೀಡಿದ್ದಾರೆ ಎಂದು ಮೃತ ಮಗುವಿನ ಪೋಷಕರು, ಪ್ರತಿಭಟನಾಕಾರರಿಗೆ ತಿಳಿಸಿದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…

8 hours ago

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…

8 hours ago

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…

8 hours ago

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್‌ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…

13 hours ago

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…

13 hours ago

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…

1 day ago