ಜನ ಮನದ ನಾಡಿ ಮಿಡಿತ

Advertisement

ಮಂಗಳೂರು ಮ.ನ.ಪಾ ವ್ಯಾಪ್ತಿಯಲ್ಲಿ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತ..!!

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಆದೇಶದಿಂದ ಸಾವಿರಾರು ಜನರು ಆಸ್ತಿ ತೆರಿಗೆ ಪಾವತಿಸುವಾಗ ಶೇ.5 ರಷ್ಟು ರಿಯಾಯಿತಿಯಿಂದ ವಂಚಿತರಾಗಿರುವ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದು ಸೂಕ್ತ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಮ.ನ.ಪಾ ಸೇರಿದಂತೆ ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪ್ರತೀ ಆರ್ಥಿಕ ವರ್ಷದ ಆರಂಭದಿಂದ ಅಂದರೆ ಏಪ್ರಿಲ್ 30 ರವರೆಗೆ ಆಸ್ತಿ ತೆರಿಗೆ ಪಾವತಿಸಿದರೆ ಶೇ.5 ರಷ್ಟು ರಿಯಾಯಿತಿ ನೀಡಲಾಗುತ್ತಿದ್ದು ಅದರನ್ವಯ ಅನೇಕರು ರಿಯಾಯಿತಿ ಸೌಲಭ್ಯ ಪಡೆದಿದ್ದಾರೆ. ಆದರೆ ರಾಜ್ಯ ಸರ್ಕಾರವು ಮೇ 9 ರಂದು ಆದೇಶವೊಂದನ್ನು ಹೊರಡಿಸಿ ಜೂನ್ ಅಂತ್ಯದ ವರೆಗೆ 2025-26ನೇ ಸಾಲಿನ ಆಸ್ತಿ ತೆರಿಗೆಯಲ್ಲಿ ರಿಯಾಯಿತಿಯ ಕಾಲಾವಧಿಯನ್ನು ವಿಸ್ತರಿಸಿದ್ದು ಮನಪಾ ವ್ಯಾಪ್ತಿಯಲ್ಲಿ ಮೇ 11 ರಿಂದ ಅನ್ವಯವಾಗಿದೆ. ಹೀಗಿರುವಾಗ ಮೇ 1 ರಿಂದ 11 ರ ವರೆಗೆ ಮ.ನ.ಪಾ ವ್ಯಾಪ್ತಿಯಲ್ಲಿ ಸುಮಾರು ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಶೇ.5 ರಷ್ಟು ರಿಯಾಯಿತಿ ನೀಡದೇ ಆಸ್ತಿ ತೆರಿಗೆ ವಸೂಲು ಮಾಡಲಾಗಿದ್ದು ಪ್ರಾಮಾಣಿಕವಾಗಿ ತೆರಿಗೆ ಪಾವತಿಸಿದವರು ರಿಯಾಯಿತಿ ಸೌಲಭ್ಯದಿಂದ ವಂಚಿತವಾದಂತಾಗಿದೆ. ಈ ಬಗ್ಗೆ ಜನಸಾಮಾನ್ಯರಿಂದ ದೂರುಗಳು ಸಹ ಬರುತ್ತಿವೆ ಎಂದರು.

ಕೂಡಲೇ ಐದು ಸಾವಿರಕ್ಕೂ ಅಧಿಕ ಮಂದಿಯಿಂದ ಸಂಗ್ರಹಿಸಲಾಗಿರುವ ಹೆಚ್ಚುವರಿ ತೆರಿಗೆಯನ್ನು ಹಿಂತಿರುಗಿಸಬೇಕು ಇಲ್ಲವೇ ಮುಂದಿನ ಆರ್ಥಿಕ ವರ್ಷದ ಆಸ್ತಿ ತೆರಿಗೆಗೆ ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಸಕ ಕಾಮತ್ ರವರು ಆಗ್ರಹಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!