ರಾ.ಹೆ.೭೫ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟುನಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದ್ದು, ಬಸ್ಸಿನಲ್ಲಿದ್ದವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮನೆಯಿಂದ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಿಲ್ಲ ಎನ್ನಲಾಗಿದೆ.



