ಯುವಕರ ಅಪಾಯಕಾರಿ ಬೈಕ್ ವ್ಹೀಲಿಂಗ್ ಕ್ರೇಜ್ ನಿಂದ ಶಿಕ್ಷಕಿಯೊಬ್ಬರು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಮೈಸೂರಿನಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಪಬ್ಲಿಕ್ ಶಾಲೆಯ ವಿಜ್ಞಾನ ಶಿಕ್ಷಕಿ ಎಚ್.ಬಿ.ಅನಿತಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜುಲೈ 18 ರಂದು ಶಿಕ್ಷಕರು ಶಾಲೆಯಿಂದ ಮನೆಗೆ ಹೀಗುತ್ತಿದ್ದ ವೇಳೆ ಗಾಯತ್ರಿಪುರಂ ಚರ್ಚ್ ಬಳಿ ಮೂರು ಜನರನ್ನು ಹೊತ್ತೊಯ್ಯುತ್ತಿದ್ದ ಕೆಟಿಎಂ ಬೈಕ್ ಅತಿವೇಗದಲ್ಲಿ ಬಂದು ಶಿಕ್ಷಕಿ ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಶಿಕ್ಷಕಿಯ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ರಸ್ತೆಯಲ್ಲಿ ಬಿದ್ದಿದ್ದಾರೆ. ತಕ್ಷಣ ಸಾರ್ವಜನಿಕರು ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸವಾರರು ಬೈಕ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಗಾಯಗೊಂಡಿರುವ ಶಿಕ್ಷಕಿ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮೈಸೂರು ನಗರ ಸಿದ್ಧಾರ್ಥ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಶೋಧ ಕಾರ್ಯ ನಡೆದಿದೆ.



