ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳು, ತೋಡುಗಳು ತುಂಬಿ ಹರಿಯುತ್ತಿವೆ. ನಗರ ಪ್ರದೇಶಗಳಲ್ಲಿ ರಾಜ ಕಾಲುವೆಗಳು ಅತಿಕ್ರಮಿಸಲ್ಪಟ್ಟದ್ದರಿಂದ ನೀರು ಕಾಲುವೆಗಳಲ್ಲಿ ಹರಿಯದೆ ರಸ್ತೆಗಳಲ್ಲಿ ಹರಿಯುತ್ತಿದೆ. ಇದರಿಂದ ಮಂಗಳೂರು ನಗರದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.
ಮುಂಗಾರು ಮಳೆ ಈ ಬಾರಿ ಕರ್ನಾಟಕ ಕರಾವಳಿಯನ್ನು ನಿಗದಿತ ಅವಧಿಗೆ ಮುಂಚಿತವಾಗಿಯೇ ಪ್ರವೇಶಿಸಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಕಾಲುವೆಗಳ, ತೋಡುಗಳ ಹೂಳೆತ್ತುವಿಕೆ ಕಾರ್ಯವನ್ನು ಕೈಗೊಳ್ಳದಿರುವುದರಿಂದ ನೀರು ಸರಾಗವಾಗಿ ಹರಿದುಹೋಗಲು ದಾರಿ ಇಲ್ಲದೆ ರಸ್ತೆಗಳಲ್ಲಿ ನೆರೆಯನ್ನು ಸೃಷ್ಟಿಸುತ್ತಿದೆ. ಇದರಿಂದ ಸಂಚಾರ ವ್ಯತ್ಯಯಗೊಳ್ಳುತ್ತಿದೆ. ಮಂಗಳೂರಿನ ಪಂಪ್ ವೆಲ್ ಈ ಬಾರಿಯೂ ವರ್ಷಪ್ರತಿಯ ಸಮಸ್ಯೆಯಾದ ನೆರೆ ನೀರು ನಿಲ್ಲುವ ಸಮಸ್ಯೆಯನ್ನು ಎದುರಿಸುತ್ತಿದೆ. ಇದರಿಂದ ಈ ಮಾರ್ಗದಲ್ಲಿ ಸಾಗುವ ವಾಹನ ಸವಾರರು ಕಷ್ಟಪಡಬೇಕಾಯಿತು. ಇಲ್ಲಿ ಕಾಲುವೆಯನ್ನು ಅತಿಕ್ರಮಿಸಿ ಕಟ್ಟಡಗಳನ್ನು ಕಟ್ಟುತ್ತಿರುವುದರಿಂದ ನೀರು ಸರಾಗವಾಗಿ ಹರಿದು ಹೋಗಲು ಹಿಂದೆ ಇದ್ದ ತೋಡಿನ ಅಗಲ ಕಿರಿದಾಗಿದೆ. ಇದರಿಂದ ನಾಲ್ಕು ಕಡೆಯಿಂದ ಪಂಪ್ ವೆಲ್ ಪ್ಲೈಓವರಿನತ್ತ ಬರುವ ನೀರು ರಸ್ತೆಯಲ್ಲಿ ನಿಂತು ಬಿಡುತ್ತದೆ.
ಜಿಲ್ಲೆಯಾದ್ಯಂತ ಮುಂಗಾರು ಮಳೆ ಅನಾಹುತಗಳನ್ನು ಉಂಟು ಮಾಡಿದೆ. ನಗರ ಹಾಗು ಗ್ರಾಮೀಣ ಪ್ರದೇಶಗಳಲ್ಲಿ ಮರಗಳು ಉರುಳಿ ಬಿದ್ದಿವೆ. ವಿದ್ಯುತ್ ಕಂಬಗಳು ಉರುಳಿವೆ. ಅನೇಕ ಕಡೆಗಳಲ್ಲಿ ವಿದ್ಯುತ್ ಪೂರೈಕೆಗೆ ತಡೆಯುಂಟಾಗಿದೆ. ಮರಗಳು ಉರುಳಿ ವಾಹನಗಳು ಜಖಂಗೊOಡಿವೆ. ಮನೆಗಳಿಗೆ ನೀರು ನುಗ್ಗಿ ಆಹಾರ ಸಾಮಗ್ರಿಗಳು ನೀರು ಪಾಲಾಗಿವೆ, ವಿದ್ಯುತ್ ಮತ್ತು ವಿದ್ಯುನ್ಮಾನ ಉಪಕರಣಗಳು ಹಾಳಾಗಿವೆ. ಗುಡ್ಡ ನೆಲಸಮ ಮಾಡಿದ, ರಸ್ತೆ ಮಾಡಿದ ಸ್ಥಳಗಳಲ್ಲಿ ಮಣ್ಣು ಕುಸಿತ, ಗುಡ್ಡ ಕುಸಿತಗಳು ಸಂಭವಿಸಿವೆ. ಮಣ್ಣು ಜರಿದು ಮನೆಯ ಗೋಡೆಗಳಿಗೆ ಹಾನಿಯಾಗಿದೆ.ಕಾಂಪೌOಡು ಗೋಡೆಗಳು ಕುಸಿದಿವೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…