ಜನ ಮನದ ನಾಡಿ ಮಿಡಿತ

Advertisement

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಜೂನ್ ೧ ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ೨೦೨೫ ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನ ಬೆಳಿಗ್ಗೆ ೯.೩೦ ರಿಂದ ರಾತ್ರಿ ೧೧ ರ ವರೆಗೆ ನಡೆಯಲಿದ್ದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಆಶೀರ್ವವಚನ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಸಭಾಧ್ಯಕ್ಷತೆಯನ್ನು ಉದ್ಯಮಿ ಶಶಿಧರ ಬಿ ಶೆಟ್ಟಿ ವಹಿಸಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವರವರ ಉಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಡಾ ಮೋಹನ್ ಆಳ್ವರವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಭಾರತದ ೮ ಶಾಸ್ತ್ರೀಯ ಕಲೆಗಳ ಪ್ರದರ್ಶನ, ಯಕ್ಷಗಾನ ಹಾಗೂ ಭಾರತೀಯ ಕಲೆಗಳ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ ಎಂದರು. ಮಧ್ಯಾಹ್ನ ೧ ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ ಕೆ ಪ್ರಕಾಶ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ರೋಹಿತ್ ಶರ್ಮಾ ತಾರಾ ಮೆರುಗು ನೀಡುವ ನಿರೀಕ್ಷೆ ಇದೆ ಎಂದರು. ಸಂಜೆ ೫.೩೦ ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಮುಂಬೈ ಹೇರಂಭ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ೨೦೨೫ ರ ಯಕ್ಷಧ್ರುವ ಕಲಾ ಗೌರವ ನೀಡಿ ಗೌರವಿಸಲಾಗುವುದು ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದರು. ೨೦೨೫ ರ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ದಂಪತಿಗಳಿಗೆ ನೀಡಿ ಗೌರವಿಸಲಾಗುವುದು,೨೦೨೫ ರ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತ, ವಿದ್ವಾಂಸ ಕುರಿಯ ಗಣಪತಿ ಶಾಸ್ತ್ರಿಯವರಿಗೆ ನೀಡಿ ಸನ್ಮಾನಿಸಲಾಗುವುದು,ರಾಷ್ಟ್ರೀಯ ಕಲಾ ಸಮ್ಮೇಳನದಲ್ಲಿ ಎಂಟು ತಂಡಗಳಿAದ ತೆಂಕು ಮತ್ತು ಬಡಗು ತಿಟ್ಟಿನ ಯುವ ಕಲಾವಿದರಿಂದ ಯಕ್ಷಗಾನ ಸ್ಪರ್ಧೆ ನಡೆಯಲಿದೆ ಎಂದರು. ಕಳೆದ ೧೦ ವರ್ಷಗಳಲ್ಲಿ ೧೫ ಕೋಟಿ ರೂ ಮೊತ್ತದ ಸೇವಾ ಯೋಜನೆಯನ್ನು ತಮ್ಮ ಪ್ರತಿಷ್ಠಾನ ಅನುಷ್ಠಾನಗೊಳಿಸಿದೆ ಎಂದವರು ಹೇಳಿದರು.

ಯೋಜನೆಗಳ ವಿವರ ನೀಡಿದ ಅವರು, ನಿವೇಶನ ರಹಿತ ೧೦೦ ಮಂದಿ ಕಲಾವಿದರಿಗೆ ಉಚಿತ ೧೦೦ ಮನೆಗಳ ನಿರ್ಮಾಣ ಪಟ್ಲ ಯಕ್ಷಾಶ್ರಯ ಯೋಜನೆಯಾಗಿದೆ. ಯಕ್ಷಗಾನ ಲೋಕದಲ್ಲಿ ಹೊಸ ಯಕ್ಷಗಾನ ಕಲಾವಿದರನ್ನು, ಕಲಾಸಕ್ತರನ್ನು ಸುಸಂಸ್ಕೃತ ಪ್ರೇಕ್ಷಕರನ್ನು ಹುಟ್ಟುಹಾಕುವ ಒಂದು ಪ್ರಗತಿಯುತ ಹೆಜ್ಜೆಯೇ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆ. ಹಿರಿಯ ಕಲಾವಿದರ ಮಾರ್ಗದರ್ಶನದ ಮೇರೆಗೆ ಪ್ರಸ್ತುತ ಕಾಲಘಟ್ಟದ ಒಟ್ಟು ೪೮ ಯಕ್ಷಗಾನ ಶಿಕ್ಷಕರು ರಾಜ್ಯದ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಯಕ್ಷಶಿಕ್ಷಣದ ತರಗತಿ ನಡೆಸುತ್ತಿದ್ದಾರೆ ಎಂದರು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಒಟ್ಟು ೮೭ ಶಾಲೆಗಳ ಸುಮಾರು ೬೫೦೦ ವಿದ್ಯಾರ್ಥಿಗಳು ಯಕ್ಷಗಾನ ಶಿಕ್ಷಣವನ್ನು ಪಡೆಯುತ್ತಿರುವುದು ಮಾತ್ರವಲ್ಲದೆ ಅದರಲ್ಲಿ ಸುಮಾರು ೪೦೦೦ ವಿದ್ಯಾರ್ಥಿಗಳ ಯಕ್ಷಗಾನ ರಂಗಪ್ರವೇಶವೂ ಈಗಾಗಲೇ ನಡೆದಿದೆ. ಈ ಯೋಜನೆಯು ಮುಖ್ಯವಾಗಿ ಸರಕಾರಿ ಶಾಲಾ ಮಕ್ಕಳ ಅಭ್ಯುದಯವನ್ನೇ ಕೇಂದ್ರವನ್ನಾಗಿರಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ ಶಾಲಾ ಅವಧಿಯಲ್ಲಿ ಶಾಲಾ ಶಿಕ್ಷಣದ ಅಂಗವಾಗಿ ಯಕ್ಷ ಶಿಕ್ಷಣದ ತರಗತಿಗಳು ನಡೆಯುತ್ತಿದ್ದು ಯಕ್ಷಗಾನ ಕಲೆಯ ಮೂಲಕ ಸಂಸ್ಕೃತಿ ಮತ್ತು ಭಾಷೆಯ ಉಳಿವು-ಬೆಳವಣಿಗೆಯತ್ತ ಈ ಯೋಜನೆ ಮುಖ ಮಾಡಿದೆ. ಯಕ್ಷಗಾನ ಕಲೆಯ ಅಭ್ಯಾಸದಿಂದಾಗಿ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಾಭಿವೃದ್ಧಿಯ ಜೊತೆಗೆ ಮಕ್ಕಳಲ್ಲಿ ಆತ್ಮಸ್ಥೆರ್ಯ ಉದ್ದೀಪನವಾಗಲಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜತೆ ಕಾರ್ಯದರ್ಶಿಗಳಾದ ರವಿಚಂದ್ರ ಶೆಟ್ಟಿ ಅಶೋಕನಗರ, ರಾಜೀವ್ ಪೂಜಾರಿ ಕೈಕಂಬ ಮತ್ತು ಉದಯಕುಮಾರ್ ಶೆಟ್ಟಿ. ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಮಂಗಳೂರು

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ) ಮಂಗಳೂರು ಇದರ ಆಶ್ರಯದಲ್ಲಿ ಜೂನ್ ೧ ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ ೨೦೨೫ ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಪಟ್ಲ ಸತೀಶ್ ಶೆಟ್ಟಿ ಸೋಮವಾರದಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಮ್ಮೇಳನ ಬೆಳಿಗ್ಗೆ ೯.೩೦ ರಿಂದ ರಾತ್ರಿ ೧೧ ರ ವರೆಗೆ ನಡೆಯಲಿದ್ದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಆಶೀರ್ವವಚನ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದು ಸಭಾಧ್ಯಕ್ಷತೆಯನ್ನು ಉದ್ಯಮಿ ಶಶಿಧರ ಬಿ ಶೆಟ್ಟಿ ವಹಿಸಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವರವರ ಉಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಡಾ ಮೋಹನ್ ಆಳ್ವರವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಭಾರತದ ೮ ಶಾಸ್ತ್ರೀಯ ಕಲೆಗಳ ಪ್ರದರ್ಶನ, ಯಕ್ಷಗಾನ ಹಾಗೂ ಭಾರತೀಯ ಕಲೆಗಳ ಛಾಯಾಚಿತ್ರ ಪ್ರದರ್ಶನ ನಡೆಯಲಿದೆ ಎಂದರು. ಮಧ್ಯಾಹ್ನ ೧ ಕ್ಕೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಎಂಆರ್ ಜಿ ಗ್ರೂಪ್ ನ ಸಿಎಂಡಿ ಡಾ ಕೆ ಪ್ರಕಾಶ್ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಸಮಾರಂಭಕ್ಕೆ ಖ್ಯಾತ ಕ್ರಿಕೆಟ್ ಆಟಗಾರ ರೋಹಿತ್ ಶರ್ಮಾ ತಾರಾ ಮೆರುಗು ನೀಡುವ ನಿರೀಕ್ಷೆ ಇದೆ ಎಂದರು. ಸಂಜೆ ೫.೩೦ ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತಿಯಲ್ಲಿ ಮುಂಬೈ ಹೇರಂಭ ಇಂಡಸ್ಟ್ರೀಸ್ ನ ಸಿಎಂಡಿ ಕನ್ಯಾನ ಸದಾಶಿವ ಶೆಟ್ಟಿ ಸಭಾಧ್ಯಕ್ಷತೆ ವಹಿಸಲಿದ್ದಾರೆ.

ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ೨೦೨೫ ರ ಯಕ್ಷಧ್ರುವ ಕಲಾ ಗೌರವ ನೀಡಿ ಗೌರವಿಸಲಾಗುವುದು ಎಂದು ಪಟ್ಲ ಸತೀಶ್ ಶೆಟ್ಟಿ ಹೇಳಿದರು. ೨೦೨೫ ರ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಚಂದ್ರಿಕಾ ಶೆಟ್ಟಿ ದಂಪತಿಗಳಿಗೆ ನೀಡಿ ಗೌರವಿಸಲಾಗುವುದು,೨೦೨೫ ರ ಯಕ್ಷಧ್ರುವ ಪಟ್ಲ ಪ್ರಶಸ್ತಿಯನ್ನು ಹಿರಿಯ ಯಕ್ಷಗಾನ ಭಾಗವತ, ವಿದ್ವಾಂಸ ಕುರಿಯ ಗಣಪತಿ ಶಾಸ್ತ್ರಿಯವರಿಗೆ ನೀಡಿ ಸನ್ಮಾನಿಸಲಾಗುವುದು,ರಾಷ್ಟ್ರೀಯ ಕಲಾ ಸಮ್ಮೇಳನದಲ್ಲಿ ಎಂಟು ತಂಡಗಳಿಂದ ತೆಂಕು ಮತ್ತು ಬಡಗು ತಿಟ್ಟಿನ ಯುವ ಕಲಾವಿದರಿಂದ ಯಕ್ಷಗಾನ ಸ್ಪರ್ಧೆ ನಡೆಯಲಿದೆ ಎಂದರು. ಕಳೆದ ೧೦ ವರ್ಷಗಳಲ್ಲಿ ೧೫ ಕೋಟಿ ರೂ ಮೊತ್ತದ ಸೇವಾ ಯೋಜನೆಯನ್ನು ತಮ್ಮ ಪ್ರತಿಷ್ಠಾನ ಅನುಷ್ಠಾನಗೊಳಿಸಿದೆ ಎಂದವರು ಹೇಳಿದರು. ಯೋಜನೆಗಳ ವಿವರ ನೀಡಿದ ಅವರು, ನಿವೇಶನ ರಹಿತ ೧೦೦ ಮಂದಿ ಕಲಾವಿದರಿಗೆ ಉಚಿತ ೧೦೦ ಮನೆಗಳ ನಿರ್ಮಾಣ ಪಟ್ಲ ಯಕ್ಷಾಶ್ರಯ ಯೋಜನೆಯಾಗಿದೆ.

ಯಕ್ಷಗಾನ ಲೋಕದಲ್ಲಿ ಹೊಸ ಯಕ್ಷಗಾನ ಕಲಾವಿದರನ್ನು, ಕಲಾಸಕ್ತರನ್ನು ಸುಸಂಸ್ಕೃತ ಪ್ರೇಕ್ಷಕರನ್ನು ಹುಟ್ಟುಹಾಕುವ ಒಂದು ಪ್ರಗತಿಯುತ ಹೆಜ್ಜೆಯೇ ಯಕ್ಷಧ್ರುವ-ಯಕ್ಷಶಿಕ್ಷಣ ಯೋಜನೆ. ಹಿರಿಯ ಕಲಾವಿದರ ಮಾರ್ಗದರ್ಶನದ ಮೇರೆಗೆ ಪ್ರಸ್ತುತ ಕಾಲಘಟ್ಟದ ಒಟ್ಟು ೪೮ ಯಕ್ಷಗಾನ ಶಿಕ್ಷಕರು ರಾಜ್ಯದ ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಯಕ್ಷಶಿಕ್ಷಣದ ತರಗತಿ ನಡೆಸುತ್ತಿದ್ದಾರೆ ಎಂದರು. ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಒಟ್ಟು ೮೭ ಶಾಲೆಗಳ ಸುಮಾರು ೬೫೦೦ ವಿದ್ಯಾರ್ಥಿಗಳು ಯಕ್ಷಗಾನ ಶಿಕ್ಷಣವನ್ನು ಪಡೆಯುತ್ತಿರುವುದು ಮಾತ್ರವಲ್ಲದೆ ಅದರಲ್ಲಿ ಸುಮಾರು ೪೦೦೦ ವಿದ್ಯಾರ್ಥಿಗಳ ಯಕ್ಷಗಾನ ರಂಗಪ್ರವೇಶವೂ ಈಗಾಗಲೇ ನಡೆದಿದೆ. ಈ ಯೋಜನೆಯು ಮುಖ್ಯವಾಗಿ ಸರಕಾರಿ ಶಾಲಾ ಮಕ್ಕಳ ಅಭ್ಯುದಯವನ್ನೇ ಕೇಂದ್ರವನ್ನಾಗಿರಿಸಿಕೊಂಡಿದೆ. ಶಿಕ್ಷಣ ಇಲಾಖೆಯ ಅನುಮತಿಯೊಂದಿಗೆ ಶಾಲಾ ಅವಧಿಯಲ್ಲಿ ಶಾಲಾ ಶಿಕ್ಷಣದ ಅಂಗವಾಗಿ ಯಕ್ಷ ಶಿಕ್ಷಣದ ತರಗತಿಗಳು ನಡೆಯುತ್ತಿದ್ದು ಯಕ್ಷಗಾನ ಕಲೆಯ ಮೂಲಕ ಸಂಸ್ಕೃತಿ ಮತ್ತು ಭಾಷೆಯ ಉಳಿವು-ಬೆಳವಣಿಗೆಯತ್ತ ಈ ಯೋಜನೆ ಮುಖ ಮಾಡಿದೆ. ಯಕ್ಷಗಾನ ಕಲೆಯ ಅಭ್ಯಾಸದಿಂದಾಗಿ ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಾಭಿವೃದ್ಧಿಯ ಜೊತೆಗೆ ಮಕ್ಕಳಲ್ಲಿ ಆತ್ಮಸ್ಥೆರ್ಯ ಉದ್ದೀಪನವಾಗಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ, ಬಾಳ ಜಗನ್ನಾಥ ಶೆಟ್ಟಿ, ಪ್ರದೀಪ್ ಆಳ್ವ ಕದ್ರಿ, ಜತೆ ಕಾರ್ಯದರ್ಶಿಗಳಾದ ರವಿಚಂದ್ರ ಶೆಟ್ಟಿ ಅಶೋಕನಗರ, ರಾಜೀವ್ ಪೂಜಾರಿ ಕೈಕಂಬ ಮತ್ತು ಉದಯಕುಮಾರ್ ಶೆಟ್ಟಿ. ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!