ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠ ಆಶ್ರಯದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ ಇದರ ಆಯೋಜನೆಯಲ್ಲಿ ರಾಜ್ಯಮಟ್ಟದ “ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ” ಇದೇ ಮೇ ೩೦ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಮುಖ್ಯ ಆಯುಕ್ತರಾದ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ೧೦ ಗಂಟೆಗೆ ಪರ್ಯಾಯ ಪುತ್ತಿಗೆ ಮಠಾಧೀರಾದ ಸುಗುಣೇಂದ್ರತೀರ್ಥ ಶ್ರೀಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ರಾಜ್ಯ ಮುಖ್ಯ ಆಯುಕ್ತ ಪಿ.ಜಿ. ಆರ್ ಸಿಂಧ್ಯಾ ಸಭಾಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು ೧೨೦೦ ಪ್ರತಿಭಾನ್ವಿತ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಈ ಬಾರಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇ. ೯೦ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು ಎಂದರು. ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಮೋಹನ್ ಆಳ್ಳ, ಉಡುಪಿ ಚಿಕ್ಕಮಗಳೂರು ಸಂಸದರಾದ ಶ್ರೀ ಕೋಟ ಶ್ರೀನಿವಾಸ್ ಪೂಜಾರಿ, ರಾಜ್ಯದ ವಿಧಾನ ಸಭೆಯ ಸ್ಪೀಕರ್ ಯುಟಿ ಖಾದರ್, ಶಾಸಕರಾದ ಯಶ್ ಪಾಲ್ ಸುವರ್ಣ, ಕಾಪು ಗುರ್ಮ ಸುರೇಶ್ ಶೆಟ್ಟಿ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಆಯುಕ್ತರಾದ ಎಂ. ಪ್ರಭಾಕರ್ ಭಟ್, ಉಡುಪಿ ಜಿಲ್ಲಾ ಸೌಟ್ ಆಯುಕ್ತ ಜನಾರ್ದನ್ ಕೊಡವೂರು, ರಾಜ್ಯ ಸಹಾಯಕ ಸಂಘಟನಾ ಆಯುಕ್ತೆ ಸುಮನಾ ಶೇಖರ್, ಜಿಲ್ಲಾ ಕಾರ್ಯದರ್ಶಿ ಆನಂದ ಅಡಿಗ ಉಪಸ್ಥಿತರಿದ್ದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…