ಕರಾವಳಿ ಜಿಲ್ಲೆ ಉಡುಪಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಗಾಳಿಮಳೆಗೆ ಸಮುದ್ರ ಪ್ರಕ್ಷುಬ್ದಗೊಂಡಿದ್ದು, ದೈತ್ಯ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಸಮುದ್ರಕ್ಕೆ ಯಾರೂ ಇಳಿಯಬಾರದೆಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಬೀಚ್ ಅಪಾಯಕಾರಿಯಾಗಿ ಪರಿಣಮಿಸಿದೆ. ಸಾರ್ವಜನಿಕರು ಮತ್ತು ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೂ ಪ್ರವಾಸಿಗರು ಬೀಚ್ ನತ್ತ ಆಗಮಿಸಿದ್ದು ಅಪಾಯವನ್ನು ಆಹ್ವಾನಿಸುತ್ತಿದ್ದಾರೆ. ಕಾಪು ಬೀಚ್ ಲೈಟ್ ಹೌಸ್ ಬಳಿ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಹಾಗೆ ಬಂದವರು ಬಂಡೆಕಲ್ಲುಗಳ ಮೇಲೆ ನಿಂತು ಸೆಲ್ಫಿ ತೆಗೆಯುವ ದುಸ್ಸಾಹಸಕ್ಕೆ ಮುಂದಾಗುವುದು ಕಂಡುಬoದಿದೆ.ಇದೇ ಕಾರಣಕ್ಕೆ ಲೈಟ್ ಹೌಸ್ ಬಳಿ ಬೀಚ್ ನುದ್ದಕ್ಕೂ ತಡೆಬೇಲಿ ಅಳವಡಿಸಲಾಗಿದೆ. ಉಳಿದಂತೆ ಮಳೆಯ ಅಬ್ಬರಕ್ಕೆ ಕೆಲವೆಡೆ ಕಡಲ್ಕೊರೆತ ಸಂಭವಿಸಿದ್ದು, ಕಡಲತೀರವಾಸಿಗಳಲ್ಲಿ ಆತಂಕ ಮನೆಮಾಡಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…