ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್ ಇಂದು ನಿಧನರಾಗಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಪೋಷಕರ ಪಾತ್ರಗಳ ಮೂಲಕ ರಂಜಿಸುತ್ತಿದ್ದ ನಟ ಶ್ರೀಧರ್ ನಾಯಕ್ ನಿಧನರಾಗಿದ್ದಾರೆ. ಶ್ರೀಧರ್ ನಾಯಕ್ ಅವರು ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಅನಾರೋಗ್ಯದಿಂದ ಶ್ರೀಧರ್ ಸೊರಗಿ ಹೋಗಿ ಗುರುತೇ ಸಿಗದಷ್ಟು ಬದಲಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಕಿರುತೆರೆಯ ಹಲವು ಸೀರಿಯಲ್ಗಳಲ್ಲಿ ಶ್ರೀಧರ್ ನಾಯಕ್ ನಟಿಸಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಪಾರು ಸೀರಿಯಲ್ನಲ್ಲಿ ನಾಯಕನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಇತ್ತಿಚೆಗಷ್ಟೇ ಪ್ರಸಾರ ಆರಂಭಿಸಿದ ವಧು ಸೀರಿಯಲ್ ನಲ್ಲೂ ಸಹ ವಧುವಿನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ನಾಯಕ್ ನಟಿಸಿದ್ದರು.



