ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್ ನಾಯಕ್​ ನಿಧನ

ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಪಾರು ಸೀರಿಯಲ್ ಖ್ಯಾತಿಯ ನಟ ಶ್ರೀಧರ್​ ನಾಯಕ್​ ಇಂದು ನಿಧನರಾಗಿದ್ದಾರೆ.

ಕನ್ನಡ ಕಿರುತೆರೆಯಲ್ಲಿ ಹಲವು ವರ್ಷಗಳಿಂದ ಪೋಷಕರ ಪಾತ್ರಗಳ ಮೂಲಕ ರಂಜಿಸುತ್ತಿದ್ದ ನಟ ಶ್ರೀಧರ್ ನಾಯಕ್​ ನಿಧನರಾಗಿದ್ದಾರೆ. ಶ್ರೀಧರ್ ನಾಯಕ್​​ ಅವರು ಕೆಲ ದಿನಗಳಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ರು. ಅನಾರೋಗ್ಯದಿಂದ ಶ್ರೀಧರ್ ಸೊರಗಿ ಹೋಗಿ ಗುರುತೇ ಸಿಗದಷ್ಟು ಬದಲಾಗಿದ್ದರು. ಇದೀಗ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

ಕಿರುತೆರೆಯ ಹಲವು ಸೀರಿಯಲ್​ಗಳಲ್ಲಿ ಶ್ರೀಧರ್ ನಾಯಕ್ ನಟಿಸಿದ್ದಾರೆ. ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಪಾರು ಸೀರಿಯಲ್​ನಲ್ಲಿ ನಾಯಕನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ಹೆಚ್ಚು ಜನಪ್ರಿಯತೆ ಪಡೆದಿದ್ದರು. ಇತ್ತಿಚೆಗಷ್ಟೇ ಪ್ರಸಾರ ಆರಂಭಿಸಿದ ವಧು ಸೀರಿಯಲ್ ನಲ್ಲೂ ಸಹ ವಧುವಿನ ಚಿಕ್ಕಪ್ಪನ ಪಾತ್ರದಲ್ಲಿ ಶ್ರೀಧರ್ ನಾಯಕ್​ ನಟಿಸಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!