ಮೇಕೆ ಮೇಯಿಸುತ್ತಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಏಕಏಕಿ ಹುಲಿ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದ ನಾಗಾಪುರ 5ನೇ ಬ್ಲಾಕ್ ನಲ್ಲಿ ನಡೆದಿದೆ.
ಹರೀಶ್ ಮೃತ ದುರ್ದೈವಿಯಾಗಿದ್ದು, ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ. ಇನ್ಮೂ ಹರೀಶ್ ಮದುವೆ ಆಗಿ 8 ತಿಂಗಳಾಗಿತ್ತು. ಮೃತ ಹರೀಶ್ ನಾಗಾಪುರ 5 ಬ್ಲಾಕ್ ನಿವಾಸಿಯಾಗಿದ್ದು, ಘಟನಾ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು. ಈ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.



