ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಭಾರತದ ವಾಯುಪಡೆಯ ಸಾಮರ್ಥ್ಯ ಹೆಚ್ಚಿಸುವ ಯೋಜನೆಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು ಅನುಮೋದನೆ

ಭಾರತೀಯ ವಾಯುಪಡೆಗಾಗಿ ಐದನೇ ತಲೆಮಾರಿನ ಸುಧಾರಿತ ಮಧ್ಯಮ ಶ್ರೇಣಿಯ ಯುದ್ಧ ವಿಮಾನಗಳನ್ನು ದೇಶೀಯವಾಗಿ ತಯಾರಿಸುವ ಬೃಹತ್ ಯೋಜನೆಯನ್ನು ಕಾರ್ಯಗತಗೊಳಿಸುವ ಯೋಜನೆಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಇಂದು ಅನುಮೋದನೆ ನೀಡಿದ್ದಾರೆ.

ಈ ಮಹತ್ವಾಕಾಂಕ್ಷೆಯ ಯೋಜನೆಯೊಂದಿಗೆ ಭಾರತದ ವಾಯುಪಡೆಯ ಸಾಮರ್ಥ್ಯ ಇನ್ನಷ್ಟು ಹೆಚ್ಚಾಗಲಿದೆ. ದೇಶೀಯವಾಗಿ ಭಾರತದ ರಕ್ಷಣಾ ಸಾಮರ್ಥ್ಯವನ್ನು ವೃದ್ಧಿಸುವ ಯೋಜನೆ ಹಾಗೂ ಬಲಿಷ್ಠ ಏರೋಸ್ಪೇಸ್ ಕೈಗಾರಿಕಾ ಪರಿಸರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಧಾರಿತ ಮಧ್ಯಮ ಶ್ರೇಣಿಯ ಯುದ್ಧ ವಿಮಾನಗಳ ಕಾರ್ಯಕ್ರಮ ಅನುಷ್ಠಾನ ಮಾದರಿಗೆ ರಕ್ಷಣಾ ಸಚಿವ ರಾಜನಾಥ ಸಿಂಗ್ ಅನುಮೋದನೆ ನೀಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

ಕೈಗಾರಿಕಾ ಸಹಭಾಗಿತ್ವದೊಂದಿಗೆ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಿದೆ. ಅಲ್ಲದೆ ಖಾಸಗಿ ಹಾಗೂ ಸಾರ್ವಜನಿಕ ವಲಯಕ್ಕೆ ಸಮಾನ ಅವಕಾಶ ಸಿಗಲಿದೆ.

ದೇಶೀಯ ಸಾಮರ್ಥ್ಯ ಹಾಗೂ ಪರಿಣತಿ ಹೆಚ್ಚಿಸುವಲ್ಲಿ ಇದೊಂದು ಮಹತ್ತರ ಹೆಜ್ಜೆಯಾಗಿದೆ. ಅತ್ಮನಿರ್ಭರ ಭಾರತದತ್ತ ಪ್ರಮುಖ ಮೈಲಿಗಲ್ಲು ಆಗಿದೆ ಎಂದು ಉಲ್ಲೇಖಿಸಲಾಗಿದೆ.

ಈ ಯೋಜನೆಯ ಪ್ರಾಥಮಿಕ ವೆಚ್ಚ ಸುಮಾರು ₹15 ಸಾವಿರ ಕೋಟಿ ಎಂದು ಅಂದಾಜಿಸಲಾಗಿದೆ. ಲಘು ಯುದ್ಧ ವಿಮಾನ (ಎಲ್‌ಸಿಎ) ತೇಜಸ್ ಯಶಸ್ಸಿನ ನಂತರ ಎಎಂಸಿಎ ಅಭಿವೃದ್ಧಿಯಲ್ಲಿ ರಕ್ಷಣಾ ಇಲಾಖೆಯ ವಿಶ್ವಾಸ ಇಮ್ಮಡಿಯಾಗಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!