ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್ಟಿ ಸೋಮಶೇಖರ್ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.
2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…