ರಾಜ್ಯ ಅರಣ್ಯ ಇಲಾಖೆ ರಾಯಭಾರಿಯಾಗಿ ಖ್ಯಾತ ಕ್ರೀಡಾಪಟು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಘೋಷಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರನ್ನು ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮ ನಿರ್ದೇಶನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿಯಿದ್ದು, ಕಾಡಿನ ಬಗ್ಗೆ ಅಪಾರ ಪ್ರೀತಿಯಿದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಹೇಳಿದ್ದಾರೆ.
ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದಾದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…