ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಘಾತಕಾರಿ ವಿಷಯವೇನೆಂದರೆ ಕಾರು ಮೊದಲ ಬಾರಿಗೆ ಅಪಘಾತಕ್ಕೀಡಾಗಿತ್ತು. ಕಾರು ಡಿವೈಡರ್ಗೆ ಡಿಕ್ಕಿಯಾಗಿ ಮಗುಚಿ ಬಿದ್ದಿತ್ತು. ಆದರೂ ಎಲ್ಲರೂ ಬದುಕುಳಿದಿದ್ದರು. ಕಾರಿನಿಂದ ಹೊರ ಬಂದ ಬಳಿಕ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಲ್ಲರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಯು ಇಡೀ ಬೀಡ್ ಅನ್ನು ಬೆಚ್ಚಿಬೀಳಿಸಿದೆ ಮತ್ತು ಮೃತರ ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿದೆ. ಬೀಡ್ ಜಿಲ್ಲೆಯ ಮೂಲಕ ಹಾದುಹೋಗುವ ಧುಲೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಗರ್ಹಿ ಸೇತುವೆಯಲ್ಲಿ ಗಂಭೀರ ಅಪಘಾತ ಸಂಭವಿಸಿದೆ. ಗೆವ್ರೈ ನಗರದ ಬಳಿಯ ಗರ್ಹಿ ಸೇತುವೆಯ ಮೇಲೆ ಎಸ್ಯುವಿ ವಾಹನವೊಂದು ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿತ್ತು.
ಯಾರಿಗೂ ಗಾಯವಾಗಿರಲಿಲ್ಲ, ಕಾರು ವಿಭಜಕಕ್ಕೆ ಡಿಕ್ಕಿ ಹೊಡೆದು ಅಲ್ಲಿ ಸಿಲುಕಿಕೊಂಡಿತು ಹೀಗಾಗಿ ಕಾರಿನಲ್ಲಿದ್ದವರು ಹೇಗೋ ಮಾಡಿ ಕಾರಿನಿಂದ ಇಳಿದು ರಸ್ತೆಗೆ ಬಂದಿದ್ದರು. ಆದರೆ ಅದೇ ಹೆದ್ದಾರಿಯಲ್ಲಿ ಹಾದುಹೋಗುತ್ತಿದ್ದ ಟ್ರಕ್ ಅತಿ ವೇಗವಾಗಿ ಬಂದು ಅಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ, ಅವರ ದೇಹಗಳು ಛಿದ್ದ ಛಿದ್ರವಾಗಿದೆ.
ಆ ಅಪಘಾತ ಎಷ್ಟು ಭೀಕರವಾಗಿತ್ತೆಂದರೆ, ಟ್ರಕ್ ಅಡಿಯಲ್ಲಿ ಸಿಲುಕಿ ಎಲ್ಲರೂ ಸಾವನ್ನಪ್ಪಿದ್ದಾರೆ. ಮೃತರ ಹೆಸರುಗಳು ಬಾಲು ಅಟ್ಕರೆ, ಮನೋಜ್ ಕರಂಡೆ, ಕೃಷ್ಣ ಜಾಧವ್, ದೀಪಕ್ ಸರೋಯಾ, ಭಾಗವತ್ ಪರಾಲ್ಕರ್ ಮತ್ತು ಸಚಿನ್ ನಾನ್ವಾರೆ. ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಹತ್ತಿರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅಪಘಾತದ ನಂತರ ಟ್ರಕ್ ಚಾಲಕ ಪರಾರಿಯಾಗಿದ್ದಾನೆ. ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಸ್ಥಳಕ್ಕೆ ಧಾವಿಸಿ ವಿಚಾರಣೆ ನಡೆಸಿದ್ದು, ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಮರೆಸಿಕೊಂಡಿರುವ ಟ್ರಕ್ ಚಾಲಕನಿಗಾಗಿ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…