ರಾಷ್ಟ್ರ

ಜಮ್ಮು: ದೇಶದ ಪ್ರತಿ ಇಂಚು ಭೂಮಿಯ ಮೇಲೂ ನಿಕಟ ನಿಗಾ ಇಟ್ಟಿದ್ದೇವೆ – ಶಶಾಂಕ್ ಆನಂದ್

ನೆರೆಯ ಪಾಕಿಸ್ತಾನವನ್ನು ನಂಬಲು ಸಾಧ್ಯವಿಲ್ಲದ ಕಾರಣ ಅಂತರರಾಷ್ಟ್ರೀಯ ಗಡಿಯಲ್ಲಿ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯನ್ನು ಮುಂದುವರಿಸಲಾಗಿದೆ. ಜತೆಗೆ, ಕಾವಲು ಪಡೆಗಳು ಹೆಚ್ಚಿನ ನಿಗಾವಹಿಸಿವೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮಹಾ ನಿರೀಕ್ಷಕ ಶಶಾಂಕ್ ಆನಂದ್ ತಿಳಿಸಿದ್ದಾರೆ.

ನಾವು (ಭದ್ರತಾ ಪಡೆಗಳು) ದೇಶದ ಪ್ರತಿ ಇಂಚು ಭೂಮಿಯ ಮೇಲೂ ನಿಕಟ ನಿಗಾ ಇಟ್ಟಿದ್ದೇವೆ. ಗಡಿಯಲ್ಲಿ ಒಳನುಸುಳುವಿಕೆ ಪ್ರಯತ್ನಗಳನ್ನು ವಿಫಲಗೊಳಿಸಲು ಕಟ್ಟೆಚ್ಚರ ವಹಿಸಿದ್ದೇವೆ ಎಂದು ಆನಂದ್ ಹೇಳಿದ್ದಾರೆ.

ಪಾಕಿಸ್ತಾನದ ಶೆಲ್ ದಾಳಿ ಮತ್ತು ಅಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ತೆಗೆದುಕೊಂಡ ಭದ್ರತಾ ಕ್ರಮಗಳ ಅಡಿಯಲ್ಲಿ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಉಗ್ರರ ಒಳನುಸುಳುವಿಕೆಯ ಸಾಧ್ಯತೆಯ ಕುರಿತ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.

‘ನಾವು ಗಡಿಯುದ್ದಕ್ಕೂ ಸಾಧ್ಯವಾದಷ್ಟು ಹೆಚ್ಚಿನ ಜಾಗರೂಕತೆ ಕಾಯ್ದುಕೊಳ್ಳುತ್ತಿದ್ದೇವೆ. ಶತ್ರುಗಳು ದುಷ್ಕೃತ್ಯ. ಗಡಿಯಾಚೆಗಿನ ಗುಂಡಿನ ದಾಳಿ ಅಥವಾ ಒಳನುಸುಳುವಿಕೆಗೆ ಪ್ರಯತ್ನಿಸುವ ಬಗ್ಗೆ ನಿರಂತರವಾಗಿ ಮಾಹಿತಿ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಗಡಿಯಲ್ಲಿ ನಾವು ಹೆಚ್ಚು ನಿಗಾವಹಿಸಿದ್ದೇವೆ. ಜತೆಗೆ, ಬಲವಾದ ಕಣ್ಣಾವಲು ವ್ಯವಸ್ಥೆಗಳನ್ನು ನಿಯೋಜಿಸಿದ್ದೇವೆ’ ಎಂದು ಅವರು ಹೇಳಿದ್ದಾರೆ.

ಸಹಾಯಕ ಕಮಾಂಡೆಂಟ್ ನೇಹಾ ಭಂಡಾರಿ ಸೇರಿದಂತೆ ಬಿಎಸ್‌ಎಫ್ ಮಹಿಳಾ ಸಿಬ್ಬಂದಿ ಮುಂಚೂಣಿ ಹುದ್ದೆಗಳನ್ನು ನಿರ್ವಹಿಸುವ ಮೂಲಕ ಅನುಕರಣೀಯ ಧೈರ್ಯವನ್ನು ಪ್ರದರ್ಶಿಸಿದ್ದಾರೆ ಎಂದು ಆನಂದ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆಗೂ ಮುನ್ನ ಅಂತರರಾಷ್ಟ್ರೀಯ ಗಡಿಯುದ್ದಕ್ಕೂ 40ರಿಂದ 50 ಶಂಕಿತ ಭಯೋತ್ಪಾದಕರು ನಡೆಸಿದ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್ ಸಿಬ್ಬಂದಿ ವಿಫಲಗೊಳಿಸಿದ್ದರು. ಜತೆಗೆ, ಸಿಯಾಲ್‌ಕೋಟ್ ವಲಯದಲ್ಲಿ ಶಂಕಿತ ಭಯೋತ್ಪಾದಕರನ್ನು ಒಳಗೊಂಡ ಪ್ರಮುಖ ಒಳನುಸುಳುವಿಕೆ ಪ್ರಯತ್ನವನ್ನು ಬಿಎಸ್‌ಎಫ್‌ ಯಶಸ್ವಿಯಾಗಿ ವಿಫಲಗೊಳಿಸಿದೆ ಎಂದು ಆನಂದ್ ಹೇಳಿದ್ದಾರೆ.

ಆಪರೇಷನ್ ಸಿಂಧೂರ ಕಾರ್ಯಾಚರಣೆ ವೇಳೆ ಪಾಕ್ ವಿರುದ್ಧ ದಾಳಿಗಳನ್ನು ನಡೆಸುವ ಮೂಲಕ ಹೆಚ್ಚು ಹಾನಿಯನ್ನು ಉಂಟುಮಾಡಿದ್ದೇವೆ. ಜತೆಗೆ, ಪಾಕ್ ಸೇನಾ ಪಡೆಗಳನ್ನು, ರೇಂಜರ್‌ಗಳು ಮತ್ತು ಭಯೋತ್ಪಾದಕರು ಸಾವುನೋವುಗಳನ್ನು ಅನುಭವಿಸಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ಸಾಂಬಾ ಸೆಕ್ಟರ್‌ನ ಒಂದು ಸೇನಾ ನೆಲೆಗೆ ‘ಆಪರೇಷನ್ ಸಿಂಧೂರ’ ಹೆಸರಿಡಲು ಮತ್ತು ಇತರ ಎರಡು ನೆಲೆಗಳಿಗೆ ಹುತಾತ್ಮ ಯೋಧರ ಹೆಸರಿಡಲು ನಾವು ಪ್ರಸ್ತಾಪಿಸುತ್ತಿದ್ದೇವೆ ಎಂದು ಅವರು ಉಲ್ಲೇಖಿಸಿದ್ದಾರೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…

4 days ago

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…

4 days ago

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…

4 days ago

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…

4 days ago

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…

4 days ago

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…

4 days ago