ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಗರಸಭೆ ಸಾಮಾನ್ಯ ಸಭೆಯಲ್ಲಿ ಭಾರೀ ಗದ್ದಲ..!

ಮಳೆಗಾಲ ಆರಂಭಕ್ಕೂ ಎರಡು ತಿಂಗಳು ಮುನ್ನ ರಸ್ತೆ ಬದಿಯ ತೋಡುಗಳ ಹೂಳೆತ್ತದ ಪರಿಣಾಮ ಈ ಬಾರಿ ನಗರದ ಹಲವು ಕಡೆ ಕೃತಕ ನೆರೆ ಸೃಷ್ಟಿಯಾಗಿ ಸಾಕಷ್ಟು ಸಮಸ್ಯೆ ಆಗಿತ್ತು.

ಇದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ನಗರಸಭೆ ಸಾಮಾನ್ಯ ಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯರು ಆರೋಪಿಸಿದ್ರು. ಇದಕ್ಕೆ ಸಾಕಷ್ಟು ಮಂದಿ ಸದಸ್ಯರು ಧ್ವನಿಗೂಡಿಸಿದ್ದಾರೆ. ಇದಕ್ಕೆ ಉತ್ತರಿಸಿದ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅವರು, ಈ ಸಂಬAಧ ಶಾಸಕರು ಹಾಗೂ ಅಧ್ಯಕ್ಷರು ತಿಂಗಳಿಗೆ ಮೂರು ಬಾರಿಯಂತೆ ಸಭೆ ನಡೆಸಿದರೂ ಹೂಳೆತ್ತುವ ಕಾಮಗಾರಿ ನಡೆಸಿಲ್ಲ. ಅಧಿಕಾರಿಗಳು ಅಧ್ಯಕ್ಷರ ಮಾತು ಕೇಳುತ್ತಿಲ್ಲವೇ?. ಇದಕ್ಕೆ ಅಧ್ಯಕ್ಷರು ಉತ್ತರಿಸಬೇಕು ಎಂದು ಒತ್ತಾಯಿಸಿದ್ದಾರೆ. ನಗರಸಭೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ದುರ್ಗಾ ಪ್ರಸಾದ್ ಅವರು, ಎರಡು ವರ್ಷಕ್ಕೊಮ್ಮೆ ನಗರದ ದೊಡ್ಡ ತೋಡುಗಳ ಹೂಳೆತ್ತುವುದು ವಾಡಿಕೆ. ರಸ್ತೆ ಬದಿಯ ತೋಡುಗಳ ಹೂಳೆತ್ತುವ ಕಾಮಗಾರಿಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಆದರೆ, 15 ದಿನ ಮುಂಚಿತವಾಗಿ ಮಳೆ ಬಂದ ಕಾರಣ ಹೂಳೆತ್ತುವ ಕಾಮಗಾರಿಗೆ ತೊಡಕಾಗಿದೆ. ಶಾಸಕರು ಸೂಚಿಸಿದ ಹಿನ್ನೆಲೆಯಲ್ಲಿ ಕಲ್ಸಂಕ ತೋಡಿನ ಹೂಳೆತ್ತುವ ಕಾಮಗಾರಿಗೆ ಏಪ್ರಿಲ್‌ನಲ್ಲಿ ಟೆಂಡರ್ ಕರೆದು, ಕಾಮಗಾರಿ ಆರಂಭಿಸಲಾಗಿತ್ತು. ಈಗಾಗಲೇ ಶೇ.80ರಷ್ಟು ಕಾಮಗಾರಿಯನ್ನು ಮುಗಿಸಲಾಗಿದೆ. ಇನ್ನೂ ಶೇ. 20ರಷ್ಟು ಕಾಮಗಾರಿ ಬಾಕಿ ಇದೆ. ಆದರೆ ಮಳೆಯಿಂದಾಗಿ ಅದಕ್ಕೆ ಸಮಸ್ಯೆ ಆಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!