ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆಯನ್ನು ಆಯೋಜಿಸಲಾಗಿದ್ದು, 21 ದೂರು ಅರ್ಜಿಗಳು ಸ್ವೀಕೃತಗೊಂಡವು. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ, ಪೊಲೀಸ್ ಉಪಾಧೀಕ್ಷಕರಾದ ಡಾ. ಗಾನಾ ಪಿ.ಕುಮಾರ್, ಸುರೇಶ್ ಕುಮಾರ್ ಪಿ ಹಾಗೂ ತಂಡ ಭೇಟಿ ನೀಡಿದ್ರು.

ಬಳಿಕ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಿ, ಭರ್ತಿ ಮಾಡಿ, ಅಫಿದಾವಿತ್ ಮಾಡಿಸಿದ ದೂರು ಅರ್ಜಿಗಳನ್ನು ಸ್ವೀಕರಿಸಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳಲ್ಲಿ ವಿಳಂಬ ಹಾಗೂ ಹಲವು ವಿಷಯಗಳ ಕುರಿತು ಸಾರ್ವಜನಿಕರು ದೂರುಗಳನ್ನು ನೀಡಿದ್ರು. ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್ ಉಪಸ್ಥಿತರಿದ್ದು, ಪೂರಕ ಸಹಕಾರ ನೀಡಿದ್ದಾರೆ.



