ಸುರತ್ಕಲ್: ರಾಜ್ಯ ವಿಧಾನಸಭೆಯ ವೇಳೆ ಸ್ಪೀಕರ್ ವಿರುದ್ಧ ಪ್ರತಿಭಟನೆ ನಡೆಸಿದ ಬಿಜೆಪಿಯ 10 ಶಾಸಕರನ್ನು ಅಮಾನತು ಮಾಡಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಬಿಜೆಪಿ ಸದಸ್ಯರು ಖಂಡಿಸಿ ರಾಜ್ಯದ ವಿವಿಧ ಕಡೆಗಳಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಗುರುವಾರ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಂಗಳೂರು ಉತ್ತರಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ, ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ ಅವರು ಕಾಂಗ್ರೆಸ್ ಪಕ್ಷದವರು ನಡೆಸಿದ ಅಮಾನತಿನ ರೀತಿಯನ್ನು ಖಂಡಿಸಿದರು. ಬಿಜೆಪಿಯ ಮುಖಂಡರು ಯುವ ಮೋರ್ಚ ಉತ್ತರಮಂಡಲದ ಪದಾಧಿಕಾರಿಗಳು, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರು ಕಾರ್ಯಕರ್ತರು ಪಾಲ್ಗೊಂಡಿದ್ದರು.



