ಜನ ಮನದ ನಾಡಿ ಮಿಡಿತ

Advertisement

ಭುವನೇಶ್ವರ: ಪತ್ರಕರ್ತನ ಮೇಲೆ ಹಲ್ಲೆ; ಪ್ರಕರಣ ದಾಖಲು

ಒಡಿಶಾದ ಬೋಲಂಗೀರ್‌ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಪತ್ರಕರ್ತ ಬಿಜಯ್ ಪ್ರಧಾನ್‌ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.

ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!