ಒಡಿಶಾದ ಬೋಲಂಗೀರ್‌ನ ಹಳ್ಳಿಯೊಂದರಲ್ಲಿ ಕಾವಲು ಗೋಡೆಯ ನಿರ್ಮಾಣದಲ್ಲಿ ನಡೆದ ಅಕ್ರಮಗಳ ಬಗ್ಗೆ ವರದಿ ಮಾಡಲು ಹೋದ ಪತ್ರಕರ್ತನ ಮೇಲೆ ಸ್ಥಳೀಯ ವ್ಯಕ್ತಿಗಳು ಸೇರಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆಯ ವೀಡಿಯೊ ವೈರಲ್ ಆದ ನಂತರ ಅಪ್ರಾಪ್ತ ವಯಸ್ಕ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪತ್ರಕರ್ತ ಬಿಜಯ್ ಪ್ರಧಾನ್ ಅನ್ನು ಸಾರ್ವಜನಿಕವಾಗಿ ಕಟ್ಟಿಹಾಕಿ ಥಳಿಸಲಾಗಿದೆಯಂತೆ. ಆರೋಪಿಗಳನ್ನು ಅಭಿನಾಶ್ ದಲೈ, ಆದಿತ್ಯ ಜೆನಾ, ಗುಮಾರ ನಾಯಕ್ ಮತ್ತು ಅಪ್ರಾಪ್ತ ವಯಸ್ಕನೊಬ್ಬ ಎಂದು ಗುರುತಿಸಲಾಗಿದೆ. ಪ್ರಧಾನ್ ಮಾಹಿತಿ ಸಂಗ್ರಹಿಸುತ್ತಾ, ಫೋಟೊಗಳನ್ನು ತೆಗೆದುಕೊಳ್ಳುತ್ತಿದ್ದಾಗ ಪುರುಷರ ಗುಂಪೊಂದು ಅವನ ಮೇಲೆ ಹಲ್ಲೆ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪಿಗಳು ಅವನ ಮೊಬೈಲ್ ಫೋನ್, ಮೈಕ್ರೊಫೋನ್ ಮತ್ತು ಇತರ ಉಪಕರಣಗಳನ್ನು ಕಿತ್ತುಕೊಂಡಿದ್ದಾರಂತೆ.
ವೈರಲ್ ಆದ ವಿಡಿಯೊದಲ್ಲಿ ಆರೋಪಿಗಳು ಪತ್ರಕರ್ತನನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದ್ದು ಅಲ್ಲದೇ,ಅವನ ಮುಖಕ್ಕೆ ಒದೆಯುತ್ತಿರುವ ದೃಶ್ಯ ಕೂಡ ಸೆರೆಯಾಗಿದೆ. ಆರೋಪಿಗಳ ವಿರುದ್ಧ ಪತ್ರಕರ್ತ ಹಲ್ಲೆ ಪ್ರಕರಣ ದಾಖಲಿಸಿದ್ದು, ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಹಾಗೂ ಈ ಕೃತ್ಯದಲ್ಲಿ ಗುತ್ತಿಗೆದಾರರ ಕೈವಾಡವಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಗುತ್ತಿಗೆದಾರರು ಈ ಕೃತ್ಯದಲ್ಲಿ ಪಾಲ್ಗೊಂಡಿದ್ದಾರೆಯೇ? ಇಲ್ಲವೇ? ಎಂಬುದನ್ನು ಕೂಲಂಕಷವಾಗಿ ತನಿಖೆ ಮಾಡಲಾಗುತ್ತಿದೆ ಮತ್ತು ತಪ್ಪಿತಸ್ಥರೆಂದು ಸಾಬೀತಾದರೆ ಅವನನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…