ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರನ್ನು ಮಂಗಳವಾರ ರಾತ್ರಿ ಕದ್ರಿ ಪೊಲೀಸರು ಬಂಧಿಸಿದ್ದಾರೆ.

ಶರಣ್ ಪಂಪ್ ವೆಲ್ ನನ್ನು ಬಂಧಿಸಿದ ಬಳಿಕ ಕದ್ರಿ ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮಾಯಿಸಿದ್ದರು.ಕೆಲ ಕಾಲ ಅಲ್ಲಿ ಉದ್ರಿಕ್ತ ಸ್ಥಿತಿ ಏರ್ಪಟ್ಟಿತ್ತು. ಸುಹಾಸ್ ಶೆಟ್ಟಿ ಹತ್ಯೆ ಸಂದರ್ಭದಲ್ಲಿ ಮೇ 2ರಂದು ನೀಡಲಾದ ಬಂದ್ ಕರೆಯ ಸಂದರ್ಭದಲ್ಲಿ ಬಸ್ ಗಳಿಗೆ ಕಲ್ಲು ತೂರಲಾಗಿತ್ತು, ಮತ್ತು ಘರ್ಷಣೆಗಳು ನಡೆದಿದ್ದವು. ಈ ಬಗ್ಗೆ ದೂರು ದಾಖಲಾಗಿತ್ತು. ಮಂಗಳವಾರ ರಾತ್ರಿ ಶರಣ್ ಪಂಪ್ ವೆಲ್ ನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ.



