ಹಿಂದುತ್ವದ ಪ್ರತಿಪಾದಕ ವಿನಾಯಕ ದಾಮೋದರ್ ಸಾವರ್ಕರ್ ಅವರ ಜನ್ಮದಿನದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಅವರು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಾವರ್ಕರ್ ಅವರ ಅದಮ್ಯ ಧೈರ್ಯ ಮತ್ತು ಹೋರಾಟದ ಸಾಹಸಗಾಥೆಯನ್ನು ದೇಶ ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.
ಸಾವರ್ಕರ್ ಅವರನ್ನು ಭಾರತ ಮಾತೆಯ ಹೆಮ್ಮೆಯ ಪುತ್ರ ಎಂದು ಬಣ್ಣಿಸಿರುವ ಮೋದಿ. ಬ್ರಿಟಿಷ್‌ರಿಂದ ಅತ್ಯಂತ ಕಠಿಣ ಚಿತ್ರಹಿಂಸೆಗೆ ಒಳಗಾದರೂ ಮಾತೃಭೂಮಿಯ ಮೇಲೆ ಸಾವರ್ಕರ್ ಅವರಿಗಿರುವ ಸಮರ್ಪಣೆಯನ್ನು ಕುಗ್ಗಿಸಲು ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಸಾವರ್ಕರ್ ಅವರ ತ್ಯಾಗ ಮತ್ತು ಬದ್ಧತೆಯು ಭಾರತದ ಅಭಿವೃದ್ಧಿಯ ನಿರ್ಮಾಣಕ್ಕೆ ದಾರಿ ದೀಪವಾಗಿ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಇನ್ನು, ಸಾವರ್ಕರ್ ಜನ್ಮದಿನದ ಶುಭಾಶಯ ತಿಳಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಭಾರತೀಯ ಸಮಾಜವನ್ನು ಅಸ್ಪೃಶ್ಯತೆಯ ಪಿಡುಗಿನಿಂದ ಮುಕ್ತಗೊಳಿಸಿ ಅದನ್ನು ಏಕತೆ ಎಂಬ ಬಲವಾದ ದಾರದಲ್ಲಿ ಬಂಧಿಸಲು ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ವೀರ ಸಾವರ್ಕರ್ ಎಲ್ಲರಿಗೂ ಸ್ಪೂರ್ತಿಯಾಗಿದ್ದಾರೆ” ಎಂದಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…