ಬಂಟ್ವಾಳ ತಾಲೂಕಿನ ಕೊಳ್ತಮಜಲು ಎಂಬಲ್ಲಿ ಮುಸ್ಲಿಂ ಯುವಕರಿಬ್ಬರ ಮೇಲೆ ನಡೆದ ಭೀಕರ ತಲ್ವಾರ್ ದಾಳಿಯ ಪರಿಣಾಮ ಓರ್ವ ಯುವಕ ಮೃತಪಟ್ಟಿರುತ್ತಾರೆ.
ಕಳೆದ ಕೆಲ ದಿನಗಳಿಂದ ಜಿಲ್ಲೆಯೆಲ್ಲೆಡೆ ಸಂಘಪರಿವಾರ ನಾಯಕರು ನಡೆಸುತ್ತಿರುವ ಪ್ರತೀಕಾರದ ಭಾಷಣದಿಂದ ಪ್ರೇರಣೆಗೊಂಡವರೇ ಈ ಕೃತ್ಯ ನಡೆಸಿದ್ದಾರೆ ಎಂಬ ಮಾತುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿದ್ದು ಪೊಲೀಸ್ ಇಲಾಖೆ ಈ ಹತ್ಯೆಯಲ್ಲಿ ಭಾಗಿಗಳಾದ ಹಾಗೂ ಇದರ ಹಿಂದಿರುವ ಸೂತ್ರಧಾರರನ್ನು ಬಂಧಿಸಬೇಕು ಎಂದು ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್ ಎಸ್ ಎಚ್ ಪತ್ರಿಕಾ ಪ್ರಕಟನೆಯಲ್ಲಿ ಆಗ್ರಹಿಸಿದ್ದಾರೆ.
ಅದೇ ರೀತಿ ಈ ಹಿಂದೆ ಬಜ್ಪೆಯಲ್ಲಿ ನಡೆದಿದ್ದ ರೌಡಿ ಶೀಟರ್ ಓರ್ವನ ಹತ್ಯೆಯ ಬಳಿಕ ಸಂಘಪರಿವಾರ ನಾಯಕರು ನಿರಂತರವಾಗಿ ಪ್ರತೀಕಾರ ತೀರಿಸುವ ಭಾಷಣಗಳನ್ನು ಬಹಿರಂಗವಾಗಿ ನಡೆಸಿದ್ದರೂ ಇವರ ವಿರುದ್ಧ ಕ್ರಮ ಕೈಗೊಳ್ಳದ, ಜನಸಾಮಾನ್ಯರ ರಕ್ಷಣೆಯ ಖಾತ್ರಿ ನೀಡದ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಗೃಹ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದೂ ಆಗ್ರಹಿಸಿದ್ದಾರೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…