ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಕುರಿಯಾಳದಲ್ಲಿ ದುಷ್ಕರ್ಮಿಗಳು ವ್ಯಕ್ತಿಯ ಹತ್ಯೆ ಮಾಡಿದ ಹಿನ್ನಲೆ ಮೇ.27ರ ಸಂಜೆಯಿ0ದ ಮೇ.30ರ ಸಂಜೆ 6 ಗಂಟೆವರೆಗೆ ಬಂಟ್ವಾಳ ,ಬೆಳ್ತಂಗಡಿ, ಪುತ್ತೂರು, ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ನಿಷೇಧಾಜ್ಞೆಯನ್ನು ಜಾರಿ ಮಾಡಿ ಅದೇಶ ಹೊರಡಿಸಲಾಗಿದೆ ಎಂದು ತಹಶಿಲ್ದಾರ್ ತಿಳಿಸಿದ್ದಾರೆ.
ರಹೀಮ್ ಎಂಬಾತನ ಕೊಲೆಯ ಬಳಿಕ ದ.ಕ.ಜಿಲ್ಲಾ ಪೋಲೀಸ್ ಘಟಕ ವ್ಯಾಪ್ತಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಾ0ತಾಗಿದ್ದು, ಪ್ರಕ್ಷ್ಯಬ್ದ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ದಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುವುದರಿಂದ ದ.ಕ.ಜಿಲ್ಲಾ ಪೋಲೀಸ್ ಘಟಕ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಅದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅತೀ ಅವಶ್ಯವಾಗಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಅಗತ್ಯವಿರುವುದರಿಂದ ದ.ಕ.ಜಿಲ್ಲಾ ಪೋಲೀಸ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಅದೇಶ ಹೊರಡಿಸಿದೆ.
ನಿಷೇಧಾಜ್ಞೆ ಅದೇಶದಿಂದ ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿಷೇಧ, ಮೆರವಣಿಗೆ ಸಭೆ ಸಮಾರಂಭಕ್ಕೆ ನಿಷೇಧ ಹೇರಲಾಗಿದೆ. ಜೊತೆಗೆ ಯಾವುದೇ ಶಸ್ತç, ದೊಣ್ಣೆ, ಕತ್ತಿ,ಗದೆ, ಬಂದೂಕು, ಚಾಕು ಕೋಲು ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧ ಮಾಡಲಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…