ಸ್ವತಂತ್ರ ಭಾರತದ ಮೊದಲನೇ ಪ್ರಧಾನಿ ಜವಾಹರ್‌ಲಾಲ್ ನೆಹರು ಅವರು ಆಧುನಿಕ ಭಾರತದ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇವರು ವಿಧಾನಸೌಧದ ಪೂರ್ವ ದ್ವಾರದ ಬಳಿ ಇರುವ ಮಾಜಿ ಪ್ರಧಾನ ಮಂತ್ರಿ ದಿವಂಗತ ಪಂಡಿತ್ ಜವಾಹರಲಾಲ್ ನೆಹರುರವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೇ ಹಾಗೂ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ರು. ನೆಹರೂ ಅವರ ಪುಣ್ಯ ತಿಥಿಯನ್ನು ಸರ್ಕಾರ ಗೌರವ ಹಾಗೂ ಅಭಿಮಾನದಿಂದ ನೆರವೇರಿಸಿದೆ. ದೇಶದ ಬಡತನವನ್ನು ಹೋಗಲಾಡಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡಿದ್ರು. ಉದ್ಯೋಗ ಸೃಷ್ಟಿ, ಮಿಶ್ರ ಆರ್ಥಿಕತೆಯನ್ನು ದೇಶದಲ್ಲಿ ಪರಿಚಯಿಸಿದ್ದಲ್ಲದೆ ದೇಶದಲ್ಲಿ ಹಸಿರು ಕ್ರಾಂತಿಗೆ ಅಡಿಗಲ್ಲು ಹಾಕಿದ್ರು. ಸಹಕಾರಿ ಚಳವಳಿ, ವಿಕೇಂದ್ರೀಕರಣಕ್ಕೆ ಬದ್ಧತೆಯಿಂದ ಕೆಲಸ ಮಾಡಿದ್ದಾರೆ. ಅವರು ಪ್ರಧಾನಿಗಳಾಗಿದ್ದ 17 ವರ್ಷಗಳ ಅವಧಿಯಲ್ಲಿ ಅನೇಕ ಅಣೆಕಟ್ಟು, ಸಾರ್ವಜನಿಕ ವಲಯದಲ್ಲಿ ಕೈಗಾರಿಕೆ, ಶಿಕ್ಷಣ ಸಂಸ್ಥೆಗಳನ್ನೂ ಸ್ಥಾಪಿಸಿದ್ರು. ದೇಶ ಆರ್ಥಿಕವಾಗಿ ಸಬಲತೆಯನ್ನು ಕಂಡುಕೊAಡಿದ್ದರೆ, ಆಹಾರದಲ್ಲಿ ಸ್ವಾವಲಂಬನೆಯನ್ನು ಕಂಡುಕೊAಡಿದ್ದರೆ ನೆಹರೂ ಅವರು ಹಾಕಿದ ಅಡಿಪಾಯ ಕಾರಣ ಎಂದಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…