ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಲಕ್ನೋ : ಐಪಿಎಲ್‌ ನಲ್ಲಿ ರಿಷಬ್ ಪಂತ್ ಗೆ 30 ಲಕ್ಷ ದಂಡ

ಮಂಗಳವಾರ ನಡೆದಿದ್ದ ಐಪಿಎಲ್‌ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಅವರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಲಕ್ನೋ ತಂಡದ ಈ ಋತುವಿನ ಮೂರನೇ ಓವರ್ ರೇಟ್ ಅಪರಾಧವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ನಾಯಕ ಪಂತ್‌ಗೆ 30 ಲಕ್ಷ, ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 50ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್‌ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದಿನ ಆವೃತ್ತಿಯಲ್ಲಿ 3 ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡರೆ ನಾಯಕನಿಗೆ 30 ಲಕ್ಷ ರೂ. ದಂಡದ ಜತೆಗೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಮುಂಬೈ ತಂಡದ ನಾಯಕ ಹಾರ್ದಿಕ್‌ ಪಾಂಡ್ಯ ಈ ಶಿಕ್ಷೆಗೆ ಗುರಿಯಾಗಿದ್ದರು. ಹಾಲಿ ಆವೃತ್ತಿಯ ಐಪಿಎಲ್‌ನಿಂದ ಈ ನಿಯಮ ಕೈಬಿಟ್ಟ ಕಾರಣ ಪಂತ್‌ ನಿಷೇಧ ಶಿಕ್ಷೆಯಿಂದ ಪಾರಾದರು.

ಹೊಸ ನಿಯಮದ ಪ್ರಕಾರ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್‌ ಮಾಡಿದರೆ ನಾಯಕರಿಗೆ ದಂಡ ವಿಧಿಸಿ, ಡಿಮೆರಿಟ್‌ ಅಂಕ ನೀಡಲಾಗುತ್ತದೆ. ಡಿಮೆರಿಟ್‌ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್‌ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.

 

ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ಘೋರ ಬ್ಯಾಟಿಂಗ್‌ ವೈಫಲ್ಯ ಕಂಡಿದ್ದ ರಿಷಭ್‌ ಪಂತ್‌ ಭಾರೀ ಟೀಕೆಗೆ ಗುರಿಯಾಗಿದ್ದರು. 27 ಕೋಟಿ ಮೊತ್ತ ಪಡೆದರೂ 27 ರನ್‌ ಗಳಿಸಲು ಸಾಧ್ಯವಾಗಲಿಲ್ಲ ಎಂದು ನೆಟ್ಟಿಗರು ಅವರನ್ನು ಟ್ರೋಲ್‌ ಮಾಡಿದ್ದರು. ಆದರೆ ಪಂತ್‌ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್‌ ಮೂಲಕ ಶತಕ ಸಿಡಿಸಿ ಎಲ್ಲ ಟೀಕೆಗೆ ಉತ್ತರ ನೀಡಿದರು. 61 ಎಸೆತಗಳಿಂದ ಅಜೇಯ 118 ರನ್‌ ಹೊಡೆದರು. 11 ಬೌಂಡರಿ, 8 ಸಿಕ್ಸರ್‌ ಸಿಡಿಸಿ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು. ಆದರೆ ಪಂದ್ಯ ಸೋತ ಕಾರಣ ಇವರ ಶತಕ ವ್ಯರ್ಥವಾಯಿತು.

 

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!