ಮಂಗಳವಾರ ನಡೆದಿದ್ದ ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ರಿಷಭ್ ಪಂತ್ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಅವರಿಗೆ 30 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ. ಇದು ಲಕ್ನೋ ತಂಡದ ಈ ಋತುವಿನ ಮೂರನೇ ಓವರ್ ರೇಟ್ ಅಪರಾಧವಾಗಿದೆ. ಹೀಗಾಗಿ ದಂಡದ ಮೊತ್ತ ದ್ವಿಗುಣಗೊಂಡಿತು. ನಾಯಕ ಪಂತ್‌ಗೆ 30 ಲಕ್ಷ, ಜತೆಗೆ ತಂಡದ ಇನ್ನುಳಿದ ಆಟಗಾರರಿಗೆ ತಲಾ 12 ಲಕ್ಷ ರೂ. ಅಥವಾ ಪಂದ್ಯ ಶುಲ್ಕದ ಶೇ. 50ರಷ್ಟು ದಂಡವನ್ನು ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.
ಹಿಂದಿನ ಆವೃತ್ತಿಯಲ್ಲಿ 3 ಬಾರಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡರೆ ನಾಯಕನಿಗೆ 30 ಲಕ್ಷ ರೂ. ದಂಡದ ಜತೆಗೆ, ಒಂದು ಪಂದ್ಯದ ನಿಷೇಧ ಹೇರಲಾಗುತ್ತಿತ್ತು. ಮುಂಬೈ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಈ ಶಿಕ್ಷೆಗೆ ಗುರಿಯಾಗಿದ್ದರು. ಹಾಲಿ ಆವೃತ್ತಿಯ ಐಪಿಎಲ್‌ನಿಂದ ಈ ನಿಯಮ ಕೈಬಿಟ್ಟ ಕಾರಣ ಪಂತ್ ನಿಷೇಧ ಶಿಕ್ಷೆಯಿಂದ ಪಾರಾದರು.
ಹೊಸ ನಿಯಮದ ಪ್ರಕಾರ ತಂಡವೊಂದು 3 ಪಂದ್ಯಗಳಲ್ಲಿ ನಿಧಾನಗತಿ ಬೌಲಿಂಗ್ ಮಾಡಿದರೆ ನಾಯಕರಿಗೆ ದಂಡ ವಿಧಿಸಿ, ಡಿಮೆರಿಟ್ ಅಂಕ ನೀಡಲಾಗುತ್ತದೆ. ಡಿಮೆರಿಟ್ ಅಂಕದ ಅವಧಿ 3 ವರ್ಷ ಇರಲಿದ್ದು, ಈ ಅವಧಿಯಲ್ಲಿ 4 ಡಿಮೆರಿಟ್ ಅಂಕ ಪಡೆದರೆ ನಾಯಕನಿಗೆ ಪಂದ್ಯದ ಸಂಭಾವನೆಯ ಶೇ.100ರಷ್ಟು ದಂಡ ವಿಧಿಸಲಾಗುತ್ತದೆ.
ಹಾಲಿ ಆವೃತ್ತಿಯ ಐಪಿಎಲ್‌ನಲ್ಲಿ ಘೋರ ಬ್ಯಾಟಿಂಗ್ ವೈಫಲ್ಯ ಕಂಡಿದ್ದ ರಿಷಭ್ ಪಂತ್ ಭಾರೀ ಟೀಕೆಗೆ ಗುರಿಯಾಗಿದ್ದರು. 27 ಕೋಟಿ ಮೊತ್ತ ಪಡೆದರೂ 27 ರನ್ ಗಳಿಸಲು ಸಾಧ್ಯವಾಗಲಿಲ್ಲ ಎಂದು ನೆಟ್ಟಿಗರು ಅವರನ್ನು ಟ್ರೋಲ್ ಮಾಡಿದ್ದರು. ಆದರೆ ಪಂತ್ ಕೊನೆಯ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಶತಕ ಸಿಡಿಸಿ ಎಲ್ಲ ಟೀಕೆಗೆ ಉತ್ತರ ನೀಡಿದರು. 61 ಎಸೆತಗಳಿಂದ ಅಜೇಯ 118 ರನ್ ಹೊಡೆದರು. 11 ಬೌಂಡರಿ, 8 ಸಿಕ್ಸರ್ ಸಿಡಿಸಿ ತವರಿನ ಅಭಿಮಾನಿಗಳಿಗೆ ಭರಪೂರ ರಂಜನೆ ಒದಗಿಸಿದರು. ಆದರೆ ಪಂದ್ಯ ಸೋತ ಕಾರಣ ಇವರ ಶತಕ ವ್ಯರ್ಥವಾಯಿತು.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…