ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರೆಗೆ ಒಟ್ಟು 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.

ನೇರ ನೇಮಕಾತಿ/ ಬಡ್ತಿ/ವರ್ಗಾವಣೆ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ.

2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಷರತ್ತುಗಳಿಗೊಳಪಟ್ಟು ಜೂನ್‌ 1ರಿಂದ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!