ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡುವವರೆಗೆ ಒಟ್ಟು 11,000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು, 2025-26ನೇ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಸೂಚನೆ ನೀಡಿದ್ದಾರೆ.
ನೇರ ನೇಮಕಾತಿ/ ಬಡ್ತಿ/ವರ್ಗಾವಣೆ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ, ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 11000 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಲಾಗಿದೆ.
2025-26ನೇ ಸಾಲಿನಲ್ಲಿ ಮೊದಲ ಹಂತದಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಪ್ರಸ್ತುತ ಖಾಲಿ ಇರುವ 9499 ವಿಷಯ ಶಿಕ್ಷಕರ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ/ಬಡ್ತಿ/ವರ್ಗಾವಣೆ ಮೂಲಕ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಮಾರ್ಚ್-2026 ರ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಒಟ್ಟು 9499 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಷರತ್ತುಗಳಿಗೊಳಪಟ್ಟು ಜೂನ್ 1ರಿಂದ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…