ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಜಿಲ್ಲೆಯಲ್ಲಿ ಸೌಹಾರ್ದತೆಗೆ ಅವಕಾಶ ಮಾಡಿಕೊಡಿ ಇಲ್ಲಾ, ರಾಜೀನಾಮೆ ಕೊಡಿ

ಬಂಟ್ವಾಳದ ತಾಲೂಕಿನಲ್ಲಿ ಹಿಂದುತ್ವವಾದಿಗಳಿ0ದ ಕೊಲೆಯಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗದ ಖಲಂದರ್ ಘಟನೆಯನ್ನು ನೋಡಿದಾಗ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ವಿಫಲಗೊಂಡಿದೆ. ಪೊಲೀಸ್ ಇಲಾಖೆಯ ವೈಫಲ್ಯ ನೇರವಾಗಿ ಕಂಡು ಬಂದಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರದ ಮುಖ್ಯಮಂತ್ರಿಗಳು ರಾಜೀನಾಮೆ ಕೊಟ್ಟು ರಾಷ್ಟ್ರಪತಿ ಆಳ್ವಿಕೆ ತರುವಂತೆ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್‌ನ ಅಧ್ಯಕ್ಷ ಅಶ್ರಫ್ ಕಲ್ಲೇಗ ಒತ್ತಾಯಿಸಿದ್ದಾರೆ.

ಇವರು ಪುತ್ತೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತ್ತೀಚೆಗಷ್ಟೆ ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯಾದ ಬಳಿಕ ಅನೇಕ ಕಡೆ ನಡೆದ ಅವರ ಸಂತಾಪ ಸಭೆಯಲ್ಲಿ ಪ್ರತಿಕಾರದ ಭಾಷಣವನ್ನು ನೇರವಾಗಿ ಹಿಂದುತ್ವವಾದಿಗಳು ಮಾಡಿದ್ದಾರೆ. ಪುತ್ತೂರಿನಲ್ಲಿ ಭರತ್ ಕುಮ್ಮೇಲು, ಬಜ್ಜೆಯಲ್ಲಿ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಆದರೆ ಪೊಲೀಸರು ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಸರಕಾರವೂ ಕೂಡಾ ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಗೃಹಸಚಿವರಿಗೆ ಪೊಲೀಸ್ ಇಲಾಖೆಯನ್ನು ಕಂಟ್ರೋಲ್ ಮಾಡುವ ಕ್ಯಾಪಸೀಟಿ ಇಲ್ಲ. ಅತಿಥಿ ಉಪನ್ಯಾಸಕರಂತೆ ಇರುವ ಉಸ್ತುವಾರಿ ಸಚಿವರಿಂದಾಗಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ. ಹಾಗಾಗಿ ನೈಜ ಹಿಂದುಗಳಿಗೆ, ಅಲ್ಪಸಂಖ್ಯಾತರಿಗೆ ರಸ್ತೆಯಲ್ಲಿ ನಡೆದಾಡಲು ಭಯದ ವಾತಾವರಣ ಸೃಷ್ಟಿಯಾಗಿದೆ. ಎಜೇಂಸ್ಟ್ಮೆ0ಟ್ ರಾಜಕಾರಣ ಮಾಡಿಕೊಂಡು ಬರುತ್ತಿರುವ ಸ್ಪೀಕರ್ ಸಾಹೇಬರಿಂದಾಗಿ ಇವತ್ತು ಜಿಲ್ಲೆಯಲ್ಲಿ ಕೊಲೆಯಂತ ಘಟನೆಗಳು ನಡೆಯುತ್ತಿದೆ. ಜಿಲ್ಲೆಯಲ್ಲಿ ಯಾವುದೇ ಘಟನೆ ನಡೆದರೂ ಕೂಡಾ ಗಡಿಬಿಡಿ ಆಕಂಡ ಅನ್ನುವರು ಅವರು ಅವರ ಹತ್ತಿರದ ಕ್ಷೇತ್ರದ ವ್ಯಕ್ತಿಯ ಹತ್ಯೆಯಾಗಿದೆ. ನಿಮ್ಮಲ್ಲಿ ಅಧಿಕಾರ ಇದೆ. ಸರಕಾರ ಇದೆ. ಈ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದಕ್ಕಾಗಿ ನಿಮ್ಮ ಕೊಡುಗೆ ಏನು ಎಂದು ಅಶ್ರಫ್ ಕಲ್ಲೇಗ ಅವರು ಪ್ರಶ್ನಿಸಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮೋನು ಬಪ್ಪಳಿಗೆ, ರಶೀದ್ ಪರ್ಲಡ್ಕ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!