ಮಂಗಳೂರು: ವರುಣ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಮೂಡಿಬಂದಿರುವ “ನಿಮ್ಮೆಲ್ಲರ ಆಶೀರ್ವಾದ” ಕನ್ನಡ ಸಿನಿಮಾ ಇಂದು ರಾಜ್ಯಾದ್ಯಂತ ತೆರೆ ಕಂಡಿದೆ.
ಸುಂದರ ಕರಾವಳಿಯ ಸೊಗಡಿನ ಒಳ್ಳೆಯ ಜನರಿರುವ ಒಂದು ಸಣ್ಣ ಊರು, ಆ ಊರಿನ ಒಬ್ಬ ಪೊಲೀಸ್ ಅಧಿಕಾರಿ ಸಿನೆಮಾದ ನಾಯಕ ‘ಆಶೀರ್ವಾದ್’. ಅವನು ಹಲವು ಏಳು ಬೀಳುಗಳನ್ನು ಕಂಡು ಹೇಗೆ ಪೋಲಿಸ್ ಆದ ಎನ್ನುವುದೇ ಸಿನಿಮಾದ ಕಥೆ. ಜೊತೆಗೆ ಪಾಯಲ್ ರಾಧಾಕೃಷ್ಣ ಹಾಗೂ ಆಶೀರ್ವಾದನ ನಡುವಿನ ಸುಂದರ ಪ್ರೇಮಕಥೆ ಇದರಲ್ಲಿದೆ ಎಂದು ನಿರ್ದೇಶಕ ರವಿಕಿರಣ್ ನಿನ್ನೆ ನಡೆದ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಕನ್ನಡದ ಮೇರು ನಟಿ ಎಂ ಏನ್ ಲಕ್ಷ್ಮೀದೇವಿ, ಮೈಮ್ ರಾಮದಾಸ್, ಸ್ವಾತಿ ಗುರುದತ್ತ್, ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ, ಸದಾಶಿವ ಅಮೀನ್, ಖಳನಟನಾಗಿ ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ಮಿಂಚಿದ್ದಾರೆ.
ವರುಣ್ ಸಿನಿ ಕ್ರಿಯೇಷನ್ ಲಾಂಛನದಲ್ಲಿ ವರುಣ್ ಹೆಗ್ಡೆ ನಿರ್ಮಾಣದ ಹೊಣೆ ಹೊತ್ತಿದ್ದಾರೆ, ರವಿಕಿರಣ್ ಕತೆ- ನಿರ್ದೇಶನ, ಸರವಣನ್ ಜಿ ಏನ್ ಛಾಯಾಗ್ರಹಣ, ರಾಷ್ಟ್ರ ಪ್ರಶಸ್ತಿ ವಿಜೇತ ಸುರೇಶ್ ಆರುಮುಗಮ್ ಸಂಕಲನ, ಸುನಾದ್ ಗೌತಮ್ ಸಂಗೀತ , ವಿವೇಕ್ ಚಕ್ರವರ್ತಿ ಹಿನ್ನೆಲೆ ಸಂಗೀತ ಚಿತ್ರದಲ್ಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಸುಮಧುರ ಹಾಡುಗಳು ಎಲ್ಲರ ಮನಸೆಳೆದಿದೆ. ರಘು ದೀಕ್ಷಿತ್ ಹಾಡಿರುವ ‘ರಕ್ಷಕ ‘ ಹಾಡಿನ ಮುಖಾಂತರ ‘ನಿಮ್ಮೆಲ್ಲರ ಆಶೀರ್ವಾದ ‘ ಚಿತ್ರತಂಡ ಜನರಿಗಾಗಿ ಹಗಲಿರುಳು ದುಡಿಯುವ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದೆ. ಹಾಡುಗಳಿಗೆ ರಜತ್ ಹೆಗ್ಡೆ, ನಿನಾದ ನಾಯಕ್, ನಿಹಾಲ್ ತಾವ್ರೋ ಧ್ವನಿ ನೀಡಿದ್ದಾರೆ. ಕರಾವಳಿಯ ಸುಂದರ ತಾಣಗಳಲ್ಲಿ ಚಿತ್ರೀಕರಣ ನಡೆದಿದೆ.



