ಬಹುವಚನಂ ಪುತ್ತೂರು, ದಿ. ಜಿ.ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿ, ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಪುತ್ತೂರು, ಸ್ವಾಮಿ ಕಲಾಮಂದಿರ ಆಶ್ರಯದಲ್ಲಿ ಶ್ರೀಮದ್ಭಾಗವತ ಪ್ರವಚನ ಸಪ್ತಾಹ ಜೂ.1ರಿಂದ 7ವರೆಗೆ ಸಂಜೆ 6ರಿಂದ 8 ರತನಕ ಬೈಪಾಸ್ ರಸ್ತೆಯ ದರ್ಶನ ಕಲಾಮಂದಿರದಲ್ಲಿ ನಡೆಯಲಿದೆ ಎಂದು ದಿ. ಜಿ. ಎಲ್. ಆಚಾರ್ಯ ಜನ್ಮಶತಾಬ್ದಿ ಸಮಿತಿಯ ಬಲರಾಮ ಆಚಾರ್ಯ ಮತ್ತು ಬಹುವಚನಂ ಸಂಸ್ಥೆಯ ಡಾ. ಶ್ರೀಶ ಕುಮಾರ್ ಎಂ. ಕೆ. ಹೇಳಿದ್ದಾರೆ.
ಪುತ್ತೂರಿನಲ್ಲಿ ಮೊದಲ ಬಾರಿಗೆ ಶ್ರೀ ವೇದವ್ಯಾಸ ವಿರಚಿತ ಪುರಾಣರಾಜ ಶ್ರೀಮದ್ಭಾಗವತ ಪ್ರವಚನವನ್ನು ಖ್ಯಾತ ವಾಗ್ಮಿ ವೀಣಾ ಬನ್ನಂಜೆ ನಡೆಸಲಿದ್ದಾರೆ. ಸನಾತನ ಧರ್ಮದ ಅರಿವನ್ನು ನೀಡುವ ನಿಟ್ಟಿನಲ್ಲಿ ಪ್ರವಚನವನ್ನು ಏರ್ಪಡಿಸಲಾಗಿದ್ದು, 600ಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿದೆ. ಮುಂದಿನ ಪೀಳಿಗೆಗೆ ವಿಚಾರಗಳನ್ನು ಉಳಿಸಿಕೊಂಡು ಹೋಗುವ ಕಾರ್ಯ ನಡೆಯಲಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ರು. ಶ್ರೀಮದ್ಭಾಗವತದ ಸಾರವನ್ನು ತಿಳಿಸುವ ಕಾರ್ಯ ನಡೆಯಲಿದ್ದು, ಆಧ್ಯಾತ್ಮದ ಕಡೆಗೆ ಒಲವಿರುವ ಪ್ರತಿಯೊಬ್ಬರು ಪ್ರವಚನದಲ್ಲಿ ಭಾಗವಹಿಸಬಹುದಾಗಿದೆ. ಜನರ ಆಸಕ್ತಿಯನ್ನು ಗಮನಿಸಿಕೊಂಡು ಪ್ರವಚನವನ್ನು ಮುಂದಿನ ದಿನ ಮುಂದುವರಿಸುವ ನಿರ್ಧಾರ ಮಾಡಲಾಗುವುದು ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸುಬ್ರಹ್ಮಣ್ಯ ನಟ್ಟೋಜ, ಸ್ವಾಮಿ ಕಲಾ ಮಂದಿರದ ಮಾಧವ ಸ್ವಾಮಿ, ಬಹುವಚನಂ ಸಂಸ್ಥೆಯ ಡಾ.ಶ್ರೀಶ ಕುಮಾರ್ ಎಂ.ಕೆ. ಉಪಸ್ಥಿತರಿದ್ರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…