ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಪುರಸ್ಕರಿಸಿ ಮಾತನಾಡಿದ ಅವರು, ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.
ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.
ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…