ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ತಿಂಗಳ ಅಂತ್ಯದವರೆಗೂ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಒಂದು ವಾರದಿಂದ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಭಾರೀ ಆವಾಂತಗಳೇ ಸೃಷ್ಟಿಸಿದೆ. ಮುಂದಿನ ದಿನಗಳಲ್ಲೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ಬಂಗಾಳ ಉಪಸಾಗರದ ವಾಯುವ್ಯ ಭಾಗದ ಒರಿಸ್ಸಾದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರಿಂದ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ, ಮೇ 28 ರಿಂದ 30ರ ವರೆಗೆ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ. ಬಳಿಕ ಮೇ 31 ರಿಂದ ಮಳೆ ತೀವ್ರತೆ ಕಡಿಮೆ ಆಗುವ ಸಾಧ್ಯತೆಯಿದೆ ಎಂದಿದ್ದಾರೆ.

ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ರೆ, ಇತ್ತ ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗಿನ ಕೆಲವು ಕಡೆಗಳಲ್ಲಿ ಭಾರಿ ಮತ್ತು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.ಇನ್ನು ಬೆಳಗಾವಿ,ಧಾರವಾಡ,ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಬೆಂಗಳೂರಿನಲ್ಲೂ ಸಹ ಈ ತಿಂಗಳ ಅಂತ್ಯದವರೆಗೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಸಿ.ಎಸ್.ಪಾಟೀಲ್ ಮಾಹಿತಿ ನೀಡಿದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!