ವಕ್ಫ್ ತಿದ್ದುಪಡಿ ಕಾಯ್ದೆ -2025ರ ವಿರುದ್ಧ ಉಡುಪಿ ಜಿಲ್ಲಾ ವಕ್ಫ್ ಉಳಿಸಿ ಸಂವಿಧಾನ ರಕ್ಷಿಸಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಾಳೆ (ಮೇ 30) ಸಂಜೆ 4ಗಂಟೆಗೆ ಉಡುಪಿ ಮಿಷನ್ ಕಾಂಪೌAಡ್‌ನಲ್ಲಿ ಬೃಹತ್ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಅಬ್ದುಲ್ ರೆಹಮಾನ್ ಕಲ್ಕಟ್ಟ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಹಿಂದೆ ಮೇ 13ರಂದು ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಪಾಕಿಸ್ತಾನ ವಿರುದ್ಧದ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭಾರತೀಯ ಸೇನೆಗೆ, ಸೈನಿಕರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಮುಂದೂಡಲಾಗಿತ್ತು. ಅದನ್ನು ಈಗ ಮೇ 30ರಂದು ನಡೆಸಲು ಉದ್ದೇಶಿಸಲಾಗಿದೆ. ಈ ಸಭೆಯಲ್ಲಿ 10,000 ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ಕೇ0ದ್ರ ಸರಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯಿದೆ ಸಂವಿಧಾನ ವಿರೋಧಿಯಾಗಿದ್ದು, ಈ ಕಾಯಿದೆ ನ್ಯಾಯದ ಬೇಡಿಕೆಗೆ ವಿರುದ್ಧವಾಗಿ ಮುಸ್ಲಿಮ್ ಸಮುದಾಯವನ್ನು ಗುರಿಯಾಗಿಸಿರುವ ತಾರತಮ್ಯದ ನಿಲವನ್ನು ಹೊಂದಿದೆ ಎಂದು ದೂರಿದರು. ಸಮಾವೇಶದಲ್ಲಿ ಅಖಿಲ ಭಾರತ ಪರ್ಸನಲ್ ಲಾ ಬೋರ್ಡ್ನ ವಕ್ತಾರ ಡಾ.ಕಾಸಿಮ್ ರಸೂಲ್ ಇಲ್ಯಾಸ್, ಸಮಾಜವಾದಿ ಪಕ್ಷದ ಕಾಂಪುರದ ಸಂಸದ ಮೌಲಾನ ಮುಹಿಬುಲ್ಲಾ, ಉಡುಪಿ-ಚಿಕ್ಕಮಗಳೂರು ಜಿಲ್ಲಾ ಖಾಝಿ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಚಿಂತಕ ಶಿವಸುಂದರ್, ಸಾಮಾಜಿಕ ಹೋರಾಟಗಾರ ನಿಕೇತ್‌ರಾಜ್ ಮೌರ್ಯ, ದಸಂಸ ಮುಖಂಡ ಸುಂದರ ಮಾಸ್ತರ್, ವಿಲಿಯಂ ಮಾರ್ಟಿಸ್ ಸೇರಿದಂತೆ ಗಣ್ಯ ಅತಿಥಿಗಳು ಪಾಲ್ಗೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಸುಂದರ್ ಮಾಸ್ತರ್, ನಾಗೇಶ್ ಕುಮಾರ್ ಉದ್ಯಾವರ, ಮುಹಮ್ಮದ್ ಇದ್ರೀಸ್ ಹೂಡೆ, ಬಿಎಸ್‌ಎಫ್ ರಫೀಕ್, ಜಫ್ರುಲ್ಲಾ ಟಿ.ಎಂ., ರಿಯಾಝ್ ಕೋಡಿ, ಅಝೀಝ್ ಉದ್ಯಾವರ ಮುಂತಾದವರು ಉಪಸ್ಥಿತರಿದ್ದರು.



